ಬೆಂಗಳೂರು
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಸೇರಿದಂತೆ ರಾಜ್ಯಮಟ್ಟದ ಹಲವು ಮುಖಂಡರ ಬಗ್ಗೆ ರಾಮನಗರ ಜಿಲ್ಲಾ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.
ಒಂದೆರಡು ದಿನಗಳಲ್ಲಿ ಅವರು ಸುದ್ದಿಗೋಷ್ಠಿ ಕರೆದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿಯನ್ನು ಸಂಘಟಿಸಲು ನಿರ್ಧರಿಸಿದ್ದ ರುದ್ರೇಶ್ ನಾಯಕರ ವರ್ತನೆಯಿಂದ ಬೇಸರಗೊಂಡಿದ್ದಾರೆ.
ಚುನಾವಣೆಗೆ ಮುನ್ನವೇ ತಮ್ಮ ನಿಲುವು ಪ್ರಕಟಿಸಲು ರುದ್ರೇಶ್ ಉದ್ದೇಶಿಸಿದ್ದರು. ಇಂತಹ ಕ್ರಮದಿಂದ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎನ್ನುವ ಕಾರಣದಿಂದ ತಕ್ಷಣಕ್ಕೆ ಸುಮ್ಮನಾಗಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ