ಜಗಳೂರು
ಜ. 2 ರಂದು ಬುಧವಾರ ಸರ್ಕಾರಿ ನಿವೃತ್ತ ನೌಕರರ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ 75 ವರ್ಷ ಪೂರ್ವಗೊಂಡ ಸರ್ಕಾರಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಪಾಲಯ್ಯ ಹೇಳಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದರು.ಪಟ್ಟಣದ ಗುರುಭವನದಲ್ಲಿ ಜ. 2 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನಿವೃತ್ತ ನೌಕರರ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ 75 ವರ್ಷ ಪೂರ್ವಗೊಂಡ ಸರ್ಕಾರಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭಕ್ಕೆ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ. ಎಲ್.ಭೈರಪ್ಪ, ರಾಜ್ಯ ಕಾರ್ಯದರ್ಶಿ ರಂಗೇಗೌಡ್ರು, ಗೌರವಾಧ್ಯಕ್ಷ ಜಯದೇವಪ್ಪ, ಶಾಸಕ ಎಸ್.ವಿ.ರಾಮಚಂದ್ರ, ಮಾಜಿ ಶಾಸಕ ಹೆಚ್.ಪಿ.ರಾಜೇಶ್, ದಾವಣಗೆರೆ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಷ್ಮುಖಪ್ಪ, ಉಪಾಧ್ಯಕ್ಷ ಜಯದೇವಯ್ಯ ತಾಲೂಕಿನ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲೆಯ ನಿವೃತ್ತ ಸರ್ಕಾರಿ ನೌಕರರ ಸಂಘದ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.
ತಾಲೂಕಿನ ಸಮಸ್ತ ಸರ್ಕಾರಿ ನಿವೃತ್ತ ನೌಕರರು ಸೇರಿದಂತೆ ಕುಟುಂಬ ಪಿಂಚಣಿದಾರರು ಅತೀ ಹೆಚ್ಚು ಸೇರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಗೌರವಾಧ್ಯಕ್ಷ ಓಂಕಾರಪ್ಪ, ಕಾರ್ಯದರ್ಶಿ ಕೆ.ಕೃಷ್ಣಪ್ಪ, ರಾಜ್ಯ ಪರಿಷತ್ ಸದಸ್ಯ ಟಿ.ಕೆ.ಮಂಜುನಾಥ್, ನಿರ್ದೇಶಕ ಚಂದ್ರಶೇಖರ್, ನಜೀರ್‍ಅಹಮ್ಮದ್, ಭೂತಪ್ಪ, ಜೆ.ಎಸ್.ಅಸನ್‍ಸಾಬ್, ಸೇರಿದಂತೆ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
