ಆಪಾರ್ಟ್‍ಮೆಂಟ್ ಕಳ್ಳನ ಬಂಧನ…!!

ಬೆಂಗಳೂರು

       ಮನೆ ಹಾಗೂ ಆಪಾರ್ಟ್‍ಮೆಂಟ್ ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬಂಧಿಸಿರುವ ಕೋರಮಂಗಲ ಪೊಲೀಸರು, 31 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

        ಚಿಕ್ಕಬಳ್ಳಾಪುರ ಮೂಲದ ಕಾಂತ್‍ರಾಜ್ ಬಂಧಿತ. ಮದುವೆಯಾದ ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಕಾಂತ್‍ರಾಜ್, ವಿಲಾಸಿ ಜೀವನಕ್ಕಾಗಿ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ. ಪತಿಯ ದುಶ್ಚಟಗಳಿಂದ ಬೇಸತ್ತ ಪತ್ನಿ ಆತನಿಂದ ದೂರವಾಗಿ ಪ್ರತ್ಯೇಕವಾಗಿ ನೆಲೆಸಿದ್ದಾರೆ.

       ಸಾರ್ವಜನಿಕ ಸ್ಥಳದಲ್ಲಿ ಕಳ್ಳತನ ಮಾಡಿದ ಪ್ರಕರಣವೊಂದರಲ್ಲಿ ಬಂಧಿತ, ಒಳಚರಂಡಿ ಮೂಲಕ ನಾಪತ್ತೆಯಾಗಿ ಹೆಸರು ಮಾಡಿದ್ದ. ತುಮಕೂರು, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ವಿವಿಧ ಪೆÇಲೀಸ್ ಠಾಣೆಗಳಲ್ಲಿ ಕಾಂತ್‍ರಾಜ್ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

       ಕೆಲ ಪ್ರಕರಣಗಳಲ್ಲಿ ಈತನನ್ನು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇನ್ನೂ ಮೂರು ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯಾರ್ಥವಾಗದೆ ಉಳಿದಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link