ಅಪಾಯಕಾರಿ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಸುರಕ್ಷತೆ ಒದಗಿಸಬೇಕು

ತುಮಕೂರು

    ಕಾರ್ಖಾನೆಗಳ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಲೀಕರು ಅಗತ್ಯ ಸುರಕ್ಷತೆಯನ್ನು ಒದಗಿಸಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತಿಳಿಸಿದರು.

     ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಆರಕ್ಷಕ ಇಲಾಖೆಗಳ ಸಹಯೋಗದಲ್ಲಿ ಭೀಮಸಂದ್ರದ ಮೆ.ಶಾಹಿ ಎಕ್ಸ್‍ಪೋಟ್ರ್ಸ್ ಪ್ರೈವೆಟ್ ಲಿಮಿಟೆಡ್‍ನಲ್ಲಿಂದು ಏರ್ಪಡಿಸಿದ್ದ “ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಮಿಕರು ಈ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳ ಮಾಲೀಕರು ಪ್ರತಿಯೊಬ್ಬ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು.

      ಕಾನೂನು ಸೇವಾ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಮಾತನಾಡಿ ಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಕಾನೂನು ರೀತಿ ಬರಬೇಕಾದ ಸೌಲಭ್ಯಗಳ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ಸಲಹೆಗಳನ್ನು ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

     ಆರ್.ಟಿ.ಓ ಅಧಿಕಾರಿ ಮಹಾದೇವಪ್ಪ ಎಂ. ಮಾತನಾಡಿ ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರು ಪ್ರಯಾಣಿಸಬಾರದೆಂದು ಅವರು ಸಲಹೆ ಹೇಳಿದರು.ಕಾರ್ಮಿಕ ಅಧಿಕಾರಿ ಜಿ.ಟಿ ನಿರಂಜನ್ ಮಾತನಾಡಿ ಕಾರ್ಮಿಕರಿಗೆ ಒದಗಿಸಬೇಕಾದ ಕನಿಷ್ಠವೇತನ, ಉಪಧನ, ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಜಯಪ್ರಕಾಶ್ ಹಾಗೂ ಭಾರತಿ, ಶಾಹಿ ಎಕ್ಸ್‍ಪೋರ್ಟ್‍ನ ಕಲ್ಯಾಣ ಅಧಿಕಾರಿ ಶ್ವೇತಾ ಸೇರಿದಂತೆ ಮತ್ತಿತರು ಹಾಜರಿದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link