ಬಳಿಕ ಮಾತನಾಡಿದ ಅವರು, ಕೊರೋನಾ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮಹತ್ವಪೂರ್ಣ ಹೆಜ್ಜೆಯಾಗಿರುವ ಆಪ್ತಮಿತ್ರ ಸಹಾಯವಾಣಿ” ಮತ್ತು ” ಆಪ್ತಮಿತ್ರ ಆಪ್”ಗೆ ಚಾಲನೆ ನೀಡಿದ್ದೇನೆ. ಜ್ವರ, ಒಣ ಕೆಮ್ಮು, ಉಸಿರಾಟದ ತೊಂದರೆ, ಇನ್‌ಫ್ಯುಯೆನ್ಜಾ ಮಾದರಿಯ ರೋಗ ಲಕ್ಷಣಗಳಿದ್ದಲ್ಲಿ ಆಪ್ತಮಿತ್ರಾ ಸಹಾಯವಾಣಿ 14410 ಕರೆ ಮಾಡಿ ಸಲಹೆ, ಮಾರ್ಗದರ್ಶನ ಪಡೆಯಬಹುದಾಗಿದೆ ಎಂದರು
ಕೋವಿಡ್ 19 ಲಕ್ಷಣ ಇರುವ ವ್ಯಕ್ತಿಗಳಿಗೆ ಸಹಾಯವಾಣಿ ಮೂಲಕ ಸಲಹೆ ಹಾಗೂ ಮಾರ್ಗದರ್ಶನ ನೀಡಿ ಅವರಿಗೆ ಸೂಕ್ತ ಚಿಕಿತ್ಸೆಗೆ ನೆರವಾಗುವುದು ಇದರ ಮುಖ್ಯ ಉದ್ದೇಶವಾಗಿದೆ. ಕೋವಿಡ್ 19 ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುವುದನ್ನು ತಪ್ಪಿಸುವ ಮೂಲಕ ರೋಗ ಹರಡುವ ಸಾಧ್ಯತೆಗಳನ್ನು ಕೂಡ ಕಡಿಮೆ ಮಾಡಬಹುದಾಗಿದೆ. ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಗತ್ಯವಸ್ತುಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದರು.
ಸಾರ್ಜನಿಕರು ಕೂಡ ಬಹುತೇಕ ಸಹಕಾರ ನೀಡುತ್ತಿದ್ದಾರೆ. ಮನೆಯಿಂದ ಹೊರಗೆ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಡೋರ್ ಡೆಲಿವರಿ ಸಹಾಯವಾಣಿಗೆ ನಿನ್ನೆ ಚಾಲನೆ ನೀಡಲಾಗಿತ್ತು. ಇಂದು ಆಪ್ತಮಿತ್ರಾ ಸಹಾಯವಾಣಿಗೆ ಚಾಲನೆ ನೀಡಿದ್ದೇನೆ. ರಾಜ್ಯದಲ್ಲಿ ಕೋಡಿವ್ 19 ನಿಯಂತ್ರಣ ಮತ್ತು ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ, ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಸ್ವಯಂ ಸೇವಾ ಸಂಸ್ಥೆಗಳು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ. ಅವರ ಪರಿಶ್ರಮವನ್ನು ಗೌರವಿಸಿ, ಸಹಕರಿಸಿ, ಶೀಘ್ರದಲ್ಲಿಯೇ ಕೋವಿಡ್ 19 ನಿಯಂತ್ರಣಕ್ಕೆ ಬರಲಿದೆ ಎಂಬ ವಿಶ್ವಾಸ ನನ್ನದು ಎಂದು ಮುಖ್ಯಮಂತ್ರಿ ಹೇಳಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತಿತರರು ಪಾಲ್ಗೊಂಡಿದ್ದರು.