ಭೂ ಸುಧಾರಣೆಯ ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಅರಸು : ಡಾ. ಕೆ. ರಾಕೇಶ್ ಕುಮಾರ್

ತುಮಕೂರು

     ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಗೇಣಿ, ಭೂಮಿ ಹಕ್ಕು ಕೊಡುವುದು ಹೀಗೆ ಹಲವು ಜನಪರ ಯೋಜನೆಗಳಿಗೆ ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಡಿ. ದೇವರಾಜ ಅರಸು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅವರು ಸ್ಮರಿಸಿದರು.

    ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಿವಂಗತ ಡಿ. ದೇವರಾಜ ಅರಸು ಅವರ 104 ನೇ ಜಯಂತಿಯ ಸಾಂಕೇತಿಕ ಆಚರಣೆಯ ಸಂದರ್ಭದಲ್ಲಿ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಅರಸು ಅವರು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಹಲವು ಯೋಜನೆಗಳ ಫಲಶೃತಿಯಿಂದಾಗಿ ಹಿಂದುಳಿದ ವರ್ಗಗಳು ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಮಂಡಲ್ ಆಯೋಗದಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಸಿಕ್ಕಿದೆ ಎಂದು ಶ್ಲಾಘಿಸಿದರು.

     ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅವರು ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ದೇವರಾಜ ಅರಸು ಅವರ 104ನೇ ಜಯಂತಿಯ ಆಚರಣೆಯ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರಮಾ ಕುಮಾರಿ, ಹಿಂದುಳಿದ ವರ್ಗಗಳ ಹಿಂದುಳಿದ ಸಮುದಾಯಗಳ ಮುಖಂಡರಾದ ಕರಿಯಣ್ಣ, ಮಹಾಲಿಂಗಪ್ಪ, ರವೀಂದ್ರಕುಮಾರ್, ರಾಮಯ್ಯ ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುಬ್ರಾನಾಯ್ಕ, ತಾಲ್ಲೂಕು ವಿಸ್ತರಣಾಧಿಕಾರಿಗಳು, ನಿಲಯ ಮೇಲ್ವಿಚಾರಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap