ಚಿತ್ರದುರ್ಗ:
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನ್ಯಾಯವಾದಿ ಸತೀಶ್‍ನನ್ನು ಕಳೆದ ನಾಲ್ಕು ದಿನಗಳ ಹಿಂದೆ ಹತ್ಯೆ ಮಾಡಿರುವುದನ್ನು ಖಂಡಿಸಿ ವಕೀಲರ ಭವನದಲ್ಲಿ ಗುರುವಾರ ಸಂತಾಪ ಸೂಚಕ ಸಭೆ ನಡೆಸಲಾಯಿತು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಎನ್.ಬಿ.ವಿಶ್ವನಾಥ್ ಸಂತಾಪ ಸಭೆಯನ್ನುದ್ದೇಶಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಕೀಲರುಗಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ನಿರ್ಭೀತಿಯಿಂದ ವಕೀಲರುಗಳು ಕಕ್ಷಿದಾರರ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಆಗುತ್ತಿಲ್ಲ. ಈ ಹಿಂದೆ ವಕೀಲರುಗಳ ಮೇಲಿನ ಹಲ್ಲೆ ಖಂಡಿಸಿ ಸಾಕಷ್ಟು ಪ್ರತಿಭಟನೆಗಳನ್ನು ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಕೀಲ ಸತೀಶ್‍ರವರನ್ನು ಕೊಲೆಗೈದಿರುವ ಆರೋಪಿಗಳನ್ನು ಕೂಡಲೆ ಬಂಧಿಸಿ ದುಃಖತಪ್ತ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ ಎನ್.ಬಿ.ವಿಶ್ವನಾಥ್ ಹತ್ಯೆಗೀಡಾಗಿರುವ ಸತೀಶ್ ಆತ್ಮಕ್ಕೆ ಶಾಂತಿ ಕೋರಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಶಿವುಯಾದವ್, ಖಜಾಂಚಿ ನಿರಂಜನ್, ಚಂದ್ರಶೇಖರ್, ತಕ್ಷಶೀಲ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.ನೂರಾರು ವಕೀಲರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ