ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹಂತ ಹಂತವಾಗಿ ಅನುದಾನ ಒದಗಿಸಿ : ಸಿಎಂ

ಬೆಂಗಳೂರು

     ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಅವರ ಅಧಿಕೃತ ನಿವಾಸದಲ್ಲಿ  ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಮಾಜಿ ಸಂಸದ ಬಸವರಾಜ್ ಪಾಟೀಲ್ ಸೇಡಂರವರು ಮಂಡಿಸಿದ ಅಭಿವೃದ್ಧಿ ಯೋಜನೆಗಳ ನೀಲಿನಕ್ಷೆಗೆ ಒಪ್ಪಿಗೆ ಸೂಚಿಸಿರುವ ಮುಖ್ಯಮಂತ್ರಿ ಬಿಎಸ್ ವೈ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಂತಹಂತವಾಗಿ ಅನುದಾನ  ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷರು ಹಾಗು ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಮ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ,ಬೀದರ,ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ  ಜಿಲ್ಲೆಗಳಲ್ಲಿ ಅನಕ್ಷರತೆ, ನಿರುದ್ಯೋಗ ಸೇರಿದಂತೆ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದ್ದು,  ಮೈಸೂರು ಕರ್ನಾಟಕಕಕ್ಕೆ ಹೋಲಿಸಿದರೆ ಪ್ರಾದೇಶಿಕ ಅಸಮಾನತೆಯಿಂದ ನರಳುತ್ತಿದೆ.  ಈ ಹಿನ್ನಲೆಯಲ್ಲಿಯೇ ಈ ಭಾಗಕ್ಕೆ ಕೇಂದ್ರ ಸರಕಾರ 371 ಜೆ ವಿಶೇಷ ಸ್ಥಾನಮಾನ ನೀಡಿತ್ತು ಎಂದು ಸ್ಮರಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

     

Recent Articles

spot_img

Related Stories

Share via
Copy link
Powered by Social Snap