ಹಾವೇರಿ :
ಆಶಾ ಕಾರ್ಯಕರ್ತೆಯರ ಕಳೆದ 15 ತಿಂಗಳಿನಿಂದ ಬಾಕಿ ಇರುವ ಎಂಸಿಟಿಎಸ್ ಪ್ರೋತ್ಸಾಹಧನ ಪಾವತಿಸುವಂತೆ ಹಾಗೂ ಖಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.ನಗರದ ಮುರುಘಾಮಠದಿಂದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಸಂಯೋ ಎ.ಐ.ಯು.ಟಿ.ಯು.ಸಿ) ದ ರಾಜ್ಯ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಎಂ.ಎಂ.ವೃತ್ತದಲ್ಲಿ ಧರಣಿ ನಡೆಸಿದರು.
ಆಶಾ ಕಾರ್ಯಕರ್ತೆಯರಿಗೆ 15 ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನವನ್ನು ಪಾವತಿಸುವವರೆಗೂ ರಾಜ್ಯದ ಸಮಸ್ತ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟ ಕೆಲಸ ಸ್ಥಗಿತಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದೇವಿ. ಜೊತೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಧರಣಿ ಜ.3 ನೇ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಸಿ ಸರಕಾರಕ್ಕೆ ಹತ್ತೋತ್ತಾಯ ಮಾಡಲಾಗಿತ್ತು.
ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನವನ್ನು ಪಾವತಿಸುವ ಬಗ್ಗೆ ಇಲಾಖೆ ಭರವಸೆ ನೀಡಿದ್ದಕ್ಕೆ ಪ್ರತಿಭಟನೆ ಹಿಂಪಡೆಯಲಾಗಿತ್ತು. ಆದರೆ ಸರಕಾರ ಇಲ್ಲಿಯ ತನಕ ಬಾಕಿ ಹಣವನ್ನು ನೀಡಿಲ್ಲ.ಬಾಕಿ ಹಣವನ್ನು ನೀಡುವ ತನಕ ಈಗ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ತಮ್ಮ ಕೆಲಸ ಸ್ಥಗಿತಗೊಳಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಲಾಖೆಯ ಯಾವುದೇ ಆರೋಗ್ಯ ಸೇವೆಗಳು, ಸರ್ವೇಗಳು ಮತ್ತು ಪರೀಕ್ಷೆಗಳು, ಸಭೆಗಳು, ಇತ್ಯಾದಿ ಕೆಲಸಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
