ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು

   ಗೌರವಧನವನ್ನು ಕನಿಷ್ಠ ಮಾಸಿಕ 12 ಸಾವಿರ ನಿಗದಿಪಡಿಸಿ,ಪಿಂಚಣಿ ಇನ್ನಿತ ಸೌಲಭ್ಯಗಳನ್ನು ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕರವನ್ನು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ನಗರದ ಪುರಭವನದ ಬಳಿ ಸೇರಿದ ನೂರಾರು ಮಂದಿ ಆಶಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಗೌರವಧನವನ್ನು ಒಟ್ಟು ಸೇರಿಸಿ ಕನಿಷ್ಠ ಮಾಸಿಕ 12 ಸಾವಿರ ನಿಗದಿಪಡಿಸಬೇಕು. ನಿವೃತ್ತರಾಗುವ ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

    ಪ್ರತಿ ತಿಂಗಳು ನಿಗದಿತ ದಿನದಂದು ಗೌರವಧನ ಪಾವತಿಸಬೇಕು. ಸಮೀಕ್ಷೆ ಮತ್ತು ಸಭೆಗಳಿಗೆ ಪ್ರತ್ಯೇಕ ಭತ್ಯೆ ನೀಡಬೇಕು ಎಂಬುದು ಸೇರಿದಂತೆ 12 ಬೇಡಿಕೆಗಳ ಈಡೇರಿಕೆ ಮಾಡಬೇಕು ಎಂದು ಒತ್ತಾಯಿಸಿದರು.ಆಶಾ ಕಾರ್ಯಕರ್ತೆಯರ ನೇಮಕಾತಿಯ ಬಳಿಕ ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ಇಳಿದಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸೂಚ್ಯಂಕಗಳಲ್ಲಿ ಏರಿಕೆಯಾಗಿದೆ. ತಿಂಗಳಲ್ಲಿ ಮೂರರಿಂದ ನಾಲ್ಕು ಸಮೀಕ್ಷೆ ಮಾಡಿಸುತ್ತಿದ್ದಾರೆ. ಕುಟುಂಬ ಮತ್ತು ಮಕ್ಕಳಿಗೆ ಸಮಯ ನೀಡಲಾಗದ ಪರಿಸ್ಥಿತಿ ಇದೆ. ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆಶಾ ಕಾರ್ಯಕರ್ತೆಯರ ಸುರಕ್ಷತೆಯ ಬಗ್ಗೆ ಸರ್ಕಾರ ಯಾವ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದರು.

    ಡಿ.ನಾಗಲಕ್ಷ್ಮಿ ಮಾತನಾಡಿ, ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಶೋಷಣೆ ನಡೆಯುತ್ತಿದೆ. ಎರಡು ಗಂಟೆ ಕೆಲಸ ಮಾಡಿದರೆ ಸಾಕು ಎಂಬ ಭರವಸೆಯಲ್ಲಿ ನೇಮಕಾತಿ ಮಾಡಲಾಗಿತ್ತು. ಈಗ ಎರಡು ಗಂಟೆ ವಿಶ್ರಾಂತಿಯೂ ಇಲ್ಲವಾಗಿದೆ.ಕೆಲಸಕ್ಕೆ ತಕ್ಕ ಗೌರವಧನ ಕೂಡ ನೀಡುತ್ತಿಲ್ಲ. ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನವನ್ನೂ ನಮಗೆ ನೀಡುತ್ತಿಲ್ಲ ಎಂದು ದೂರಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link