ದೇಶದ ಏಳಿಗೆಗೆ ಅಟಲ್ ಜೀ ಕೊಡುಗೆ ಅಪಾರ : ಡಿ ವಿ ಸದಾನಂದಗೌಡ

ಬೆಂಗಳೂರು

   ಕುಶಲಕರ್ಮಿಗಳಾಗಿರುವ ಕ್ಷತ್ರೀಯ ಸಮಾಜದವರ ಅಭಿವೃಧ್ಧಿಗೆ ಕ್ಷತ್ರಿಯ ಸಮಾಜ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭರವಸೆ ನೀಡಿದರು.

   ಹಿಂದುಳಿದ ವರ್ಗಗಳ ವ್ಯಾಪ್ತಿಯಲ್ಲಿ ಬರುವ ರಾಜು ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮದ ಅಗತ್ಯವನ್ನು ಪ್ರತಿಪಾದಿಸಿದ ಅವರು ನಿಗಮ ಸ್ಥಾಪನೆಯಿಂದ ಸಮಾಜವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ವಾಗಿ ಪ್ರಗತಿ ಸಾಧಿಸಲಿದೆ.ಅದೇ ರೀತಿಯಲ್ಲಿ, ಎಲ್ಲಾ ಸಮಾಜಗಳು ಅಭಿವೃದ್ಧಿಯಾದಲ್ಲಿ ದೇಶವು ಕೂಡ ಅಭಿವೃದ್ಧಿಯಾಗುತ್ತದೆ ಎಂದರು.

   ನಗರದ ರೆಸಿಡೆನ್ಸಿ ರಸ್ತೆಯ ಖಾಸಗಿ ಹೋಟೆಲ್‌ವೊಂದರಲ್ಲಿ ಬುಧವಾರ ಕರ್ನಾಟಕ ರಾಜು ಕ್ಷತ್ರಿಯ ಸಂಘದ ವತಿಯಿಂದ ಆಯೋಜಿಸಿದ್ದ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು . ಎಲ್ಲ ರಾಜ್ಯಗಳ ಅಭಿವೃದ್ಧಿ ಯಿಂದ ದೇಶ ಹೆಚ್ಚಿನ ಅಭಿವೃದ್ಧಿ ಆಗಲಿದೆ. ಇದರಲ್ಲಿ ಬಿಜೆಪಿಗೆ ನಂಬಿಕೆ ಇದೆ. ಹಾಗಾಗಿ ಮುಂದಿನ ಸಂಕ್ರಾಂತಿ ಬಳಿಕ ರಾಜು ಕ್ಷತ್ರಿಯ ಸಮಾಜದ ಮುಖಂಡರ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನಿಗಮ ಸ್ಥಾಪನೆಗೆ ಒತ್ತಡ ಹೇರಲಾಗುವುದು ಎಂದರು.

     ದೇಶದ ಏಳಿಗೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕೊಡುಗೆ ಸಾಕಷ್ಟಿದೆ. ಅವರ ಆರ್ಥಿಕ ಶಿಸ್ತು ಹಾಗೂ ಆಡಳಿತ ವೈಖರಿ ಅವರನ್ನು ಮುತ್ಸದ್ಧಿ ರಾಜಕಾರಣಿಯನ್ನಾಗಿ ಮಾಡಿದೆ. ಅವರ ಜನ್ಮದಿನದ ಸಂದರ್ಭದಲ್ಲಿ ವಾಜಪೇಯಿ ಅವರ ಸಾಧನೆ ಹಾಗೂ ದೂರದೃಷ್ಟಿ ಯನ್ನು ಗಮನಿಸಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲಾ ಮುನ್ನಡೆಯಬೇಕಿದೆ ಎಂದು ಸಚಿವರು ವಿವರಿಸಿದರು.

     ಕರ್ನಾಟಕ  ಕ್ಷತ್ರಿಯ ಸಂಘದ ಅಧ್ಯಕ್ಷ ಎಲ್.ಕೆ.ರಾಜು ಮಾತನಾಡಿ, ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ಇರುವ ಕ್ಷತ್ರಿಯ ಸಮುದಾಯ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ನಿರ್ಲಕ್ಷಿತ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆಯಾಗಬೇಕಿದೆ ಎಂದರು.

       ಇತ್ತೀಚೆಗೆ ನಡೆದ ಸಮುದಾಯದ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಗಮ ಸ್ಥಾಪಿಸುವ ಭರವಸೆ ನೀಡಿದ್ದರು. ಈಗ ಅವರ ನೇತೃತ್ವದಲ್ಲೇ ಸರ್ಕಾರವಿದ್ದು, ನಿಗಮ ಸ್ಥಾಪಿಸಿ ಭರವಸೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಸಂಸದ ಪಿ.ಸಿ.ಮೋಹನ್, ಉಪ ಮೇಯರ್ ರಾಮ ಮೋಹನ್ ರಾಜು ಸೇರಿದಂತೆ ಪ್ರಮುಖರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap