ನಟ ಕೋಮಲ್ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ

ಬೆಂಗಳೂರು

   ನಟ ಕೋಮಲ್ ಅವರ ಕಾರು ಅಡ್ಡಗಟ್ಟಿದ ಅಪರಿಚಿತ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ರೈಲ್ವೇ ಕೆಳ ಸೇತುವೆ ಬಳಿ ಮಂಗಳವಾರ ನಡೆದಿದೆ.ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ, ಕೋಮಲ್ ಅವರ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾನೆ. ಹೊಡೆತದ ಏಟಿಗೆ ಕೋಮಲ್ ಮುಖ ಹಾಗೂ ಮೂಗಿಗೆ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಆದರೆ, ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಸದ್ಯ ಮಲ್ಲೇಶ್ವರಂ ಠಾಣಾ ಪೊಲೀಸರು ಹಲ್ಲೆ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap