ಬೆಂಗಳೂರು
ಆಟೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವೃದ್ಧೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ದುರ್ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾಡಯರಕನ ಹಳ್ಳಿಯ ಸುಬ್ಬಮ್ಮ (70)ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಡಯರಕನ ಹಳ್ಳಿಯಿಂದ ಸುಬ್ಬಮ್ಮ ಅವರನ್ನು ಆಟೋ ಚಾಲಕ ಕೂಡಿಸಿಕೊಂಡು ಹೋಗುತ್ತಿದ್ದಾಗ ನಿನ್ನೆ ಬೆಳಿಗ್ಗೆ 9ರ ವೇಳೆ ಮೈಲನ ಹಳ್ಳಿ ಬಳಿ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು ತಲೆಗೆ ಗಾಯಗೊಂಡಿದ್ದ ಸುಬ್ಬಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೈಕಿ ಡಿಕ್ಕಿ ಗಂಭೀರ ಗಾಯ
ಕಳೆದ ಜ. 6 ರಂದು ಕಬ್ಬನ್‍ಪಾರ್ಕ್‍ನಲ್ಲಿ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ವೃದ್ಧರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ತಮ್ಮ ಹೆಸರು, ವಿಳಾಸ ಹೇಳುವ ಸ್ಥಿತಿಯಲ್ಲಿ ಗಾಯಗೊಂಡಿರುವ ವೃದ್ಧರು ಇರುವುದಿಲ್ಲ. ಕೋಲು ಮುಖ ಹೊಂದಿರುವ ವೃದ್ಧರು, ಬಲಗೈನಲ್ಲಿ ಕಿರುಬೆರಳು ಇರುವುದಿಲ್ಲ. ವಾರಸುದಾರರಿದ್ದರೆ ಕಬ್ಬನ್‍ಪಾರ್ಕ್ ಸಂಚಾರ ಪೊಲೀಸ್ ಠಾಣೆ-22942912 ಇಲ್ಲವೆ 9480801828ಗೆ ಸಂಪರ್ಕಿಸಬಹುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








