ಬೆಂಗಳೂರು:
ಬೆಂಗಳೂರು ಕೃಷಿ ವಿವಿಯಲ್ಲಿ ದೇವೇಗೌಡರ ಹೆಸರಿನಲ್ಲಿ ರೈತರಿಗೆ ಕೃಷಿ ಪ್ರಶಸ್ತಿಯೊಂದನ್ನು ನೀಡಲು ತೀರ್ಮಾನಿಸಲಾಗಿದೆ.ಮಾಜಿ ಪ್ರಧಾನಿ ದೇವೇಗೌಡ ಅವರ ಹೆಸರಿನಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ನೀಡಲು ರಂಗಚೇತನ ಸಂಸ್ಕೃತಿ ಕೇಂದ್ರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಅಂಗೀಕರಿಸಿ ಒಪ್ಪಿಗೆ ನೀಡಿದ್ದು, ನವೆಂಬರ್ 15ರಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ಪ್ರಶಸ್ತಿಗೆ ಕೃಷಿಯಲ್ಲಿ ತೊಡಗಿಕೊಂಡಿರುವವರನ್ನು ಆಯ್ಕೆ ಮಾಡಿ ಅವರಿಗೆ ದೇವೇಗೌಡರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ.
ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದ್ದು, ಪ್ರಶಸ್ತಿ ಮೊತ್ತವನ್ನು ರಂಗಚೇತನ ಸಂಸ್ಕೃತಿ ಕೇಂದ್ರ ಭರಿಸಲಿದೆ ಎಂದು ತಿಳಿಸಲಾಗಿದ್ದು, ಪ್ರಶಸ್ತಿ ಆಯ್ಕೆಗಾಗಿ ಬೈರೇಗೌಡ ಪ್ರಶಸ್ತಿ ಆಯ್ಕೆಗೆ ಅನುಸರಿಸುವ ಮಾನದಂಡವನ್ನೇ ಸಹ ಅನುಸರಿಸಿ ಪ್ರಶಸ್ತಿ ನೀಡಲಾಗುವುದೆಂದು ಬೆಂಗಳೂರು ಕೃಷಿ ವಿವಿ ಕುಲಪತಿಗಳು ತಿಳಿಸಿದ್ದಾರೆ.