ಉತ್ತಮ ಆರೋಗ್ಯಕ್ಕಾಗಿ ಜಾಗೃತಿ ಜಾಥಾ

ಗುಬ್ಬಿ

       ಉತ್ತಮ ಆರೋಗ್ಯದಿಂದಿರಬೇಕಾದರೆ ಸ್ವಚ್ಛತೆ ಅತ್ಯವಶ್ಯಕವಾಗಿದ್ದು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅರಿವು ಮೂಡಿಸಲು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ:ಬಿಂಧುಮಾಧವ ತಿಳಿಸಿದರು.
ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಸ್ವಚ್ಛತಾ ಆಂದೋಲನ ಹಾಗೂ ಕುಷ್ಠರೋಗ ಅರಿವು ಕಾರ್ಯಕ್ರಮ ಜಾಗೃತಿ ಜಾಥಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣ ಪ್ರದೇಶದಿಂದ ಹಿಡಿದು ಗ್ರಾಮದಲ್ಲಿಯು ಸಹ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದ್ದು ಇದರಿಂದ ಸಾಕಷ್ಟು ರೋಗಗಳು ಉಲ್ಬಣಿಸುತ್ತವೆ. ಸೊಳ್ಳೆ , ನೊಣಗಳು, ಕ್ರೀಮಿಕೀಟಗಳ ಹೆಚ್ಚುವುದರಿಂದ ರೋಗಗಳು ಹೆಚ್ಚಾಗುತ್ತವೆ.

          ಹಾಗಾಗಿ ಇಂದು ಗಾಂಧೀಜಿಯವರ ಹುತಾತ್ಮದಿನವಾಗಿದ್ದು ಅವರು ಸಹ ಹೆಚ್ಚು ಸ್ವಚ್ಛತೆಗೆ ಹಾಗೂ ಕುಷ್ಠ ನಿವಾರಣೆಗೆ ಹೆಚ್ಚು ಜಾಗೃತಿ ಮೂಡಿಸಲು ಸಾರ್ವಜನಿಕರಿಗೆ ಮಾಹಿತಿ ತಿಳಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಪಟ್ಟಣದಲ್ಲಿ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ಬಸ್ ನಿಲ್ಧಾಣದವರೆಗೂ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಜಾಥಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿ ಡಾ: ದಿವಾಕರ್, ಡಾ:ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link