ಹರಿಹರ
ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ ಬರುವ ವೃದ್ಯಾಪ , ವಿಧವಾ ವೇತನ ಮತ್ತು ಪಡಿತರ ಚೀಟಿ ರೈತರ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಮಾಜಿ ಶಾಸಕ ಬಿಪಿ.ಹರೀಶ್ ಖುದ್ದಾಗಿ ತಾಲ್ಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ತಾಲ್ಲೂಕಿನ ಮೆಲೆಬೆನ್ನೂರು ಗ್ರಾಮದ ರೈತರ ಪಂಪ್ ಸೆಟೆಗಳಿಗೆ ನಿರಂತರ 14 ತಾಸು ತ್ರಿಫೆಸ್ ವಿದ್ಯುತ್ ನೀಡಬೇಕೆಂದು ಬೆಸ್ಕಾಂ ಕಚೇರಿ ಎದುರು ಮುತ್ತಿಗೆ ಹಾಕಿ ಪ್ರತಿಭಟಿಸಿ ರೈತರ ಪರ ಬೆಂಬಲ ಸೂಚಿಸಿದ್ದರು, ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ ವೃದ್ಯಾಪ ವೇತನ, ವಿಧವಾ ವೇತನ, ರೈತರ ಜಮೀನುಗಳಲ್ಲಿ ಹದ್ಬಸ್ತು ಮಾಡಿಸುವುದು, ಫಹಣಿ, ಮುಟೇಷನ್, ಪಡಿತರ ಚೀಟಿ ಸೇರಿದಂತೆ ಇನ್ನಿತರೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೆ ಸಕಾಲಕ್ಕೆ ಸರಿಯಾಗಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೇಲಸ ಮಾಡಬೇಕು ಎಂದರು.
ಸರ್ಕಾರ ನಿಮ್ಮನ್ನ ನೇಮಕ ಮಾಡಿರುವುದು ನಾಗರೀಕರ ಪರವಾಗಿ ಕೆಲಸ ಕಾರ್ಯಗಳನ್ನು ಮಾಡುವುದರ ಜೊತೆಗೆ ಅವರ ಕುಂದು ಕೊರತೆಗಳನ್ನು ನಿವಾರಿಸಿ ಸರ್ಕಾರದ ಸವಲತ್ತುಗಳನ್ನು ಒದಗಿಸಿಕೊಡಬೇಕೆಂದು ಅಧಿಕಾರಿಗಳಿಗೆ ಹೇಳಿದರು.ಮಾಜಿ ಶಾಸಕರು ತಾಲ್ಲೂಕು ಕಚೇರಿಗೆ ಆಗಮಿಸುತ್ತಿದ್ದಂತೆಯೆ ಸಾರ್ವಜನಿಕರು ರೈತರು ಹರಿಹರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ನಮ್ಮ ಬಳಿ ಸಮಸ್ಯೆಗಳನ್ನು ತೋಡಿಕೊಂಡಿರುವ ಕಾರಣ ಕಛೇರಿಗೆ ಆಗಮಿಸಿದ್ದೆನೆ ಎಂದರು.
ಈಗಾಗಲೇ ಬೇಸಿಗೆ ಕಾಲ ಆರಂಭವಾಗಿದ್ದು,ನಗರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುತ್ತದೆ. ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗುತ್ತದೆ. ಸರ್ಕಾರವು ರೈತರ ಪರ ಸರ್ಕಾರವೆಂದು ಬರೀ ಬೊಬ್ಬೆ ಹೊಡೆಯುವುದನ್ನು ಬಿಟ್ಟು ರೈತರ ಸಮಸ್ಯೆಗಳನ್ನು ಆಲಿಸಿ ಅವರ ಕಷ್ಟಗಳನ್ನು ನಿವಾರಿಸುವುದಕ್ಕೆ ಅಧಿಕಾರಿಗಳು ಮುಂದಾಗಬೇಕು, ರೈತ ಬೆಳೆದರೆ ನಮಗೆ ಅನ್ನ, ರೈತರನ್ನು ಕಡೆಗಣಿಸುವುದು ಸರಿಯಲ್ಲ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಅಭಿವೃದ್ಧಿಯ ಕೇಲಸಗಳು ಕುಂಠಿತಗೊಂಡಿವೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಅಧಿಕಾರಿಗಳು ಎಚ್ಚೆತ್ತುಕೊಂಡು ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಚುರುಕಾಗಿ ಪೂರ್ಣಗೊಳಿಸಬೇಕು, ಇಲ್ಲವಾದಲ್ಲಿ ಬೀದಿಗಿಳಿದು ಹೋರಾಟ ಮಾಡುವುದಕ್ಕೆ ಅನುವು ಮಾಡಿಕೊಡದೆ ತಮ್ಮ ಕರ್ತವ್ಯವನ್ನು ಪ್ರಾಮಾಣಿಕ ನಿಷ್ಠೆಯಿಂದ ಮಾಡಬೇಕೆಂದು ಅಧಿಕಾರಿಗಳಿಗೆ ಹೇಳಿದರು.