ಅನಂತದಲ್ಲಿ ಲೀನವಾದ ಶಾಸಕ ಬಿ.ಸತ್ಯನಾರಾಯಣ..!

ತುಮಕೂರು

     ಕಳೆದ ಆಗಸ್ಟ್ 4ರಂದು ನಿಧನರಾದ ಮಾಜಿ ಸಚಿವ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಸತ್ಯನಾರಾಯಣ ಅವರ ಅಂತಿಮ ಸಂಸ್ಕಾರವು ಶಿರಾ ತಾಲ್ಲೂಕಿನ ಭುವನಹಳ್ಳಿಯಲ್ಲಿರುವ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

    ಆಗಸ್ಟ್ 5 ರಂದು ಸಂಜೆ 4-30 ಗಂಟೆಗೆ ನಡೆದ ಅಂತ್ಯಕ್ರಿಯೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಡಿ.ಕೆ. ಶಿವಕುಮಾರ್, ಶ್ರೀನಿವಾಸ್, ಗೌರಿಶಂಕರ್, ಶಿವಲಿಂಗೇಗೌಡ, ರಂಗನಾಥ್, ವಿಧಾನ ಪರಿಷತ್ ಶಾಸಕರಾದ ಬೆಮಲ್ ಕಾಂತರಾಜ್, ಚೌಡರೆಡ್ಡಿ ತೂಪಲ್ಲಿ, ತಿಪ್ಪೇಸ್ವಾಮಿ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕರಾದ ಟಿ.ಬಿ.ಜಯಚಂದ್ರ, ರಫೀಕ್ ಅಹಮ್ಮದ್, ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೆ. ವಂಶಿಕೃಷ್ಣ ಮತ್ತಿತರರು ಪಾಲ್ಗೊಂಡಿದ್ದರು.

     ಮಾಜಿ ಸಚಿವ ಹಾಗೂ ಶಾಸಕರಾದ ಡಾ: ಜಿ. ಪರಮೇಶ್ವರ್, ಜ್ಯೋತಿ ಗಣೇಶ್,  ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ.ರೇವಣ್ಣ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ಸುರೇಶ್‍ಗೌಡ, ಜಿಲ್ಲಾ ಪಂಚಾಯತಿ ಸಿಇಓ ಶುಭಾ ಕಲ್ಯಾಣ್ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಹಾಗೂ ಅಭಿಮಾನಿಗಳು ಶಾಸಕ ಸತ್ಯನಾರಾಯಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.ತುಮಕೂರು ನಗರದಲ್ಲಿರುವ ಪಕ್ಷದ ಕಛೇರಿ ಹಾಗೂ ಶಿರಾ ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗಿತ್ತು. ಶಾಸಕರ ಅಪಾರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link