ಜನರಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ತತ್ವಾದರ್ಶಗಳ ಅರಿವು ಮೂಡಿಸಬೇಕಿದೆ-ಡೀಸಿ

ತುಮಕೂರು

        ಹಸಿರು ಕ್ರಾಂತಿಯ ಹರಿಕಾರ ಹಾಗೂ ಹಲವು ಅಭಿವೃದ್ಧಿಗಳಿಗೆ ಕಾರಣಕರ್ತರಾದ ಮಾಜಿ ಉಪಪ್ರಧಾನಿ ಡಾ: ಬಾಬು ಜಗಜೀವನ್ ರಾಂ ಅವರ ತತ್ವ ಮತ್ತು ಆದರ್ಶಗಳ ಬಗ್ಗೆ ಮಕ್ಕಳು ಸೇರಿದಂತೆ ಎಲ್ಲಾ ವರ್ಗದ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರು ಕರೆ ನೀಡಿದರು.

       ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಬಾಬು ಜಗಜೀವನ್ ರಾಂ ಅವರ 112ನೇ ಜಯಂತಿ ಅಂಗವಾಗಿ ಸಾಂಕೇತಿಕವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

        ಭಾರತದಲ್ಲಿ ಆಹಾರ ಭದ್ರತೆಯಲ್ಲಿ ಸಫಲತೆ ಕಂಡಿದ್ದರೆ ಅದಕ್ಕೆ ಬಾಬು ಜಗಜೀವನ್‍ರಾಂ ಅವರು ಕಾರಣ. ಹೊರದೇಶಗಳಿಂದ ದವಸ ಧಾನ್ಯಗಳನ್ನು ತಂದು ದೇಶದ ಜನರ ಹೊಟ್ಟೆ ತುಂಬಿಸುವ ಕಾಲದಲ್ಲಿ ಹಸಿರು ಕ್ರಾಂತಿಗೆ ನಾಂದಿ ಹಾಡಿದರು. ಕಾರ್ಮಿಕ ಸಚಿವರಾಗಿ ಕಲ್ಲಿದ್ದಲು ಸಚಿವರಾಗಿ ಹಾಗೂ ಉಪಪ್ರಧಾನಿಗಳಾಗಿ ಕಾರ್ಯನಿರ್ವಹಿಸಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿಗಳಿಗೆ ಕಾರಣಕರ್ತರಾದರು. ಇಂತಹ ಮಹಾನ್ ನಾಯಕನ ತತ್ವ ಆದರ್ಶಗಳ ಕುರಿತು ಮಕ್ಕಳಲ್ಲಿ ಹಾಗೂ ಎಲ್ಲಾ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದರು.

      ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ: ವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಸಿಇಓ ಶುಭಾ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ: ಜಿ.ಪಿ.ದೇವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link