ಬಡವರ ಬಂದು ಸಾಲ ವಿತರಣಾ ಕಾರ್ಯಕ್ರಮ

ಕೊರಟಗೆರೆ

     ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಕೊರಟಗೆರೆ ತಾಲ್ಲೂಕಿನ 16 ವ್ಯವಸಾಯ ಸೇವಾ ಸಹಕಾರ ಸಂಘದ 8100 ಜನ ಬಡರೈತರ ಸಾಲವನ್ನು ಈಗಾಗಲೇ ಮನ್ನಾ ಮಾಡಿದೆ. 2018-19ನೇ ಸಾಲಿನಲ್ಲಿ 16 ಬ್ಯಾಂಕಿನಲ್ಲಿ 9050 ಜನ ರೈತರ 32 ಕೋಟಿ 50 ಲಕ್ಷ ಸಾಲಮನ್ನಾದ ಪ್ರಕ್ರಿಯೆ ನಡೆಯುತ್ತಿದೆ ಎಂದು ತುಮಕೂಕು ಡಿಸಿಸಿ ಬ್ಯಾಂಕಿನ ನಿರ್ದೇಶಕ ಆರ್.ರಾಜೇಂದ್ರ ತಿಳಿಸಿದರು.

      ಪಟ್ಟಣದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ಕೊರಟಗೆರೆ, ಹೊಳವನಹಳ್ಳಿ ಮತ್ತು ಕಸಬಾ ಶಾಖೆಗಳ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ರೈತರಿಗೆ ಬೆಳೆಸಾಲ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಬಡವರ ಬಂಧು ಸಾಲ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

       ಡಿಸಿಸಿ ಬ್ಯಾಂಕಿನಲ್ಲಿ ಸಾಲ ಪಡೆದುಕೊಂಡ ರೈತ ಮೃತಪಟ್ಟರೆ 1ಲಕ್ಷದೊಳಗಿನ ರೈತನ ಸಾಲ ಮನ್ನಾ ಮಾಡುವ ನಿರ್ಧಾರವನ್ನು ನಮ್ಮ ಡಿಸಿಸಿ ಬ್ಯಾಂಕ್ ತೆಗೆದುಕೊಂಡಿದೆ. ಸಹಕಾರಿ ಸಂಘದಲ್ಲಿ ಸಾಲ ಪಡೆದು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೈತರು ಸೇರಿದಂತೆ ಬಡವರು ಠೇವಣಿ ಇಡುತ್ತಿದ್ದಾರೆ. ರೈತರ ಪರವಾದ ನಮ್ಮ ಡಿಸಿಸಿ ಬ್ಯಾಂಕಿನಲ್ಲಿ ನಿಮ್ಮ ಹಣವನ್ನು ಠೇವಣಿ ಇಟ್ಟು ಡಿಸಿಸಿ ಬ್ಯಾಂಕಿನ ಅಭಿವೃದ್ದಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

         ಡಿಸಿಸಿ ಬಾಂಕಿನ ವ್ಯವಸ್ಥಾಪಕ ನಿರ್ದೇಶಕ ಜಿ.ಪ್ರಕಾಶ್ ಮಾತನಾಡಿ ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ಬಡವರ ಬಂಧು ಯೋಜನೆಯನ್ನು ಜಾರಿಗೆ ತಂದಿದೆ. ಬೀದಿ ಬದಿಯಲ್ಲಿ ಹಣ್ಣು, ಹೂ, ತರಕಾರಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಆರ್ಥಿಕವಾಗಿ ಶಕ್ತಿ ನೀಡಲು ತಲಾ 10 ಸಾವಿರ ಸಾಲ ನೀಡಲು ನಿರ್ಧರಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಕೆಸಿಸಿ ಸಾಲವನ್ನು ಡಿಸಿಸಿ ಬ್ಯಾಂಕಿನ ಅಧ್ಯಕ್ಷರ ಸೂಚನೆ ಮೇರೆಗೆ ನೀಡುತ್ತಿದ್ದೇವೆ ಎಂದು ಹೇಳಿದರು.

        ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ಬೋರಣ್ಣ ಮಾತನಾಡಿ ಕಸಬಾ ವ್ಯವಸಾಯ ಸೇವಾ ಸಂಘದಿಂದ ಈಗ 200ಜನ ರೈತರಿಗೆ ಬೆಳೆಸಾಲ ಮತ್ತು ಬೀದಿಬದಿಯಲ್ಲಿ ವ್ಯಾಪಾರ ಮಾಡುವ 41ಜನರಿಗೆ ಬಡವರ ಬಂಧು ಯೋಜನೆಯಡಿ ತಲಾ 10ಸಾವಿರ ಸಾಲ ವಿತರಣೆ ಮಾಡಲಾಗಿದೆ. ಸಾಲ ಪಡೆದ ವ್ಯಾಪಾರಿಗಳು ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಧೃಡರಾಗಬೇಕು ಎಂದು ಮನವಿ ಮಾಡಿದರು.

       ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ, ನೋಡಲ್ ಅಧಿಕಾರಿ ಶಿವಣ್ಣ, ಹೊಳವನಹಳ್ಳಿ ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಮಹೇಶ್‍ಕುಮಾರ್, ಕೊರಟಗೆರೆ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಲೋಕೇಶ್, ವಿಎಸ್‍ಎಸ್‍ಎನ್ ಅಧ್ಯಕ್ಷರಾದ ರಾಜಣ್ಣ, ರಿಯಾಸತ್‍ಅಲಿ, ಉಪಾಧ್ಯಕ್ಷ ಪುಟ್ಟನರಸಪ್ಪ, ನಿರ್ದೇಶಕರಾದ ನರಸಿಂಹಪ್ಪ, ವಿನಯ್, ಶಶಿಕಲಾ, ಅಂಬಿಕಾ, ಸುರೇಶ್ ಸೇರಿದಂತೆ ಇತರರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link