ಹೊಸದುರ್ಗ:
ಸರ್ಕಾರ ಘೋಷಿಸಿರುವ ಬಗರ್ ಹುಕ್ಕುಂ ಸಾಗುವಳಿಯ ಜಮೀನಿನ ಅವಧಿ ವಿಸ್ತರಿಸಲು ಇಲ್ಲಿನ ರೈತರು ತಹಶೀಲ್ದಾರ್ ವಿಜಯ್ ಕುಮಾರ್ ಅವರಿಗೆ ಮನವಿ ಮಾಡಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ತಮ್ಮ ಮನವಿಯನ್ನು ಸಲ್ಲಿಸಿದರು.ನಂತರ ತಹಶೀಲ್ದಾರ್ ವಿಜಯ್ ಕುಮಾರ್ ಸ್ಥಳಕ್ಕೆ ಧಾವಿಸಿ ಮಾತನಾಡಿದ ಅವರು ಸರ್ವರ್ ಸಮಸ್ಯೆಯಿಂದ ಅರ್ಜಿದಾರರಿಗೆ ತುಂಬಾ ತೊಂದರೆಯುಂಟಾಗಿದೆ. ಹಗಲು ರಾತ್ರಿ ಎನ್ನದೇ ಕಚೇರಿಯಲ್ಲಿ ಕಾದು ಕುಳಿತುಕೊಂಡಿರುವುದು ನಮಗೆ ನೋವಿನ ಸಂಗತಿಯಾಗಿದೆ. ಸರ್ವರ್ ಸಮಸ್ಯೆ ನಮ್ಮ ಬಳಿ ಮಾತ್ರವಲ್ಲದೇ ಇಡೀ ರಾಜ್ಯದಲ್ಲಿ ಸಮಸ್ಯೆ ತುಂಬಾ ಇದೆ ಎಂದರು.
ರೈತರ ಮನವಿಯನ್ನು ಪರಿಶೀಲಿಸಿ ಮನವಿಯನ್ನು ಜಿಲ್ಲಾಧಿಕಾರಿಯವರಿಗೆ ಇಂದೇ ಕಳುಹಿಸುತ್ತೇವೆ. ಲೋಕಸಭಾ ಚುನಾವಣೆ ಹತ್ತಿರವಿರುವುದರಿಂದ ಅವಧಿ ವಿಸ್ತರಿಸಲು ಸರ್ಕಾರಕ್ಕೆ ಶಿಫಾರಸ್ತು ಮಾಡುತ್ತೇವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ