ಗುಬ್ಬಿ
ಪಟ್ಟಣದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಹೇರೂರು ಕೆರೆಯನ್ನು ಹೇಮಾವತಿ ನೀರಿನಿಂದ ಭರ್ತಿಮಾಡಲಾಗಿದೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಹೇರೂರು ಕೆರೆ ಭರ್ತಿಯಾಗಿದ್ದು ಕೆರೆಗೆ ಬಾಗಿನ ಅರ್ಪಿಸುವ ಮೂಲಕ ಗಂಗಾ ಪೂಜೆ ಸಲ್ಲಿಸಿ ಮಾತನಾಡಿದ ಅವರು ಗ್ರಾಮೀಣ ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಜನವರಿ 15ರವೆರೆಗೂ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತದೆ ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲಾಗುತ್ತದೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರಧೇಶಗಳಲ್ಲಿ ವಿದ್ಯುತ್ ಸಮಸ್ಯೆ ತೀವೃಗೊಳ್ಳುತ್ತಿದ್ದು ಸಮರ್ಪಕ ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿದ್ದು ತಾಲ್ಲೂಕಿನ ಹಲವು ಕಡೆಗಳಲ್ಲಿ ಹೊಸದಾಗಿ ಉಪವಿದ್ಯುತ್ ಸ್ಥಾವರಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು ಪಟ್ಟಣದಲ್ಲಿ ಯುಜಿಡಿಯಲ್ಲಿ ಕೆಲಸ ಮಾಡುವ ಸಮಯದಲ್ಲಿ ಹಾಳಾಗಿರುವ ರಸ್ತೆಯನ್ನು ತ್ವರಿತವಾಗಿ ದುರಸ್ಥಿಗೊಳಿಸಲಾಗುತ್ತದೆ. ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಒಂದು ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿಚಾರವನ್ನು ಎಳೆದು ತರುವುದು ಸರಿಯಲ್ಲ ಎಂದ ಅವರು ಜಿಲ್ಲಾ ಪಂಚಾಯತಿ ಅಧ್ಯಕ್ಷರ ವಿಚಾರದಲ್ಲಿ ಅವಧಿ ಹಂಚಿಕೆ ಸೂತ್ರ ಮಾಡಿಕೊಳ್ಳುವಾಗ ಇದ್ದ ಮುಖಂಡರು ಕುಳಿತು ಚರ್ಚೆ ಮಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ ಅಂದು ಜೆಡಿಎಸ್‍ನ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರೊ ಆ ರೀತಿ ಕೆಲವು ಮುಖಂಡರ ಜೊತೆಯಲ್ಲಿ ಸೇರಿ ಬಿಜೆಪಿಯೊಟ್ಟಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು ಈಗ ಅದನ್ನು ಸಮುದಾಯ ಮುಂದಿಟ್ಟುಕೊಂಡು ಕೆಲವರು ಪತ್ರಿಕಾ ಗೊಷ್ಟಿಯಲ್ಲಿ ಮಾತನಾಡುವುದು ಎಷ್ಟು ಸರಿಯೂ ಗೊತ್ತಿಲ್ಲ ಇಂತಹವನ್ನು ಸಮುದಾಯದವರೆ ಹೊರ ಇಡುವುದು ಒಳಿತು ಎಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಕೆರೆಗೆ ನೀರು ತುಂಬಿಸಲು ಶ್ರಮಿಸಿದವರನ್ನು ಸಚಿವರು ಅಭಿನಂದಿಸಿದರು.
ಗಂಗಾ ಪೂಜಾ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಸಿ.ಮೋಹನ್, ಕುಮಾರ್, ಸುನಿತಾ, ಜಿ.ಆರ್. ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಶ್ವೇತ, ಜಯಲಕ್ಷ್ಮಮ್ಮ, ಜಿ.ಸಿ.ಕೃಷ್ಣಮೂರ್ತಿ, ಮಹಮದ್‍ಸಾಧಿಕ್, ಆಯೀಷಾತಾಸೀನ್, ರೇಣುಕಾಪ್ರಸಾದ್, ಮಂಗಳಮ್ಮ, ಭಾರತಿಶ್ರೀನಿವಾಸ್, ಮುಖ್ಯಾಧಿಕಾರಿ ಅಧಿಕಾರಿ ನಾಗೇಂದ್ರಪ್ಪ ಸೇರಿದಂತೆ ಪಟ್ಟಣ ಪಂಚಾಯ್ತಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








