2025ರೊಳಗಾಗಿ ಬಾಲಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನಾಗಿ ಮಾಡಲು ಶ್ರಮಿಸಿ: ಬಿ.ಸಿ ಬಿರಾದಾರ್

ಬಳ್ಳಾರಿ

     2025ರೊಳಗಾಗಿ ಬಾಲ ಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನು ಮಾಡಲು ಸಾರ್ವಜನಿಕರು, ಪೋಷಕರು, ಅಧಿಕಾರಿಗಳು ಸೇರಿದಂತೆ ಸರ್ವರು ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಸಿ ಬಿರಾದಾರ್ ಅವರು ಕರೆ ನೀಡಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಮಕ್ಕಳ ಸಹಾಯ ವಾಣಿ 1098 ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬಂಡಿಹಟ್ಟಿಯ ರಮಾಲದೇವಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ .

      ಮಕ್ಕಳನ್ನು ಕಾರ್ಮಿಕ ಪದ್ಧತಿಗೆ ತಳ್ಳಿದರೆ ಅವರಿಗೆ ಹಾಗೂ ದೇಶದ ಭವಿಷ್ಯ ಅತಂತ್ರದ ಸ್ಥಿತಿ ಎದುರಿಸಬೇಕಾಗುತ್ತದೆ ಎಂಬದನ್ನು ತಮ್ಮ ಮಾತುಗಳಲ್ಲಿ ವ್ಯಕ್ತಪಡಿಸಿದ ನ್ಯಾಯಾಧೀಶರು, ಶಿಕ್ಷಕರು, ಪಾಲಕರು, ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಗೆ ಹೋಗದಂತೆ ತಡೆದು ಅವರು ಗುಣಮಟ್ಟದ ಶಿಕ್ಷಣ ನೀಡಿ, ಸಂವಿಧಾನದ ಆಶಯಗಳೊಂದಿಗೆ ಭವ್ಯ ಭಾರತ ಪ್ರಜೆಯಾಗಿ ಹೊರಹೊಮ್ಮುವಂತೆ ಮಾಡಬೇಕಿದೆ ಎಂದರು.

     ಪ್ರಸ್ತುತ ಭಾರತದ ಜನಸಂಖ್ಯೆ ಆಧಾರದಲ್ಲಿ ಶೇ.37ರಷ್ಟು ಮಕ್ಕಳಿದ್ದಾರೆ. ಅವರಿಗೆ ಶಿಕ್ಷಣ ಕೊಡಿಸಿ ಜವಾಬ್ದಾರಿ ಹೆಚ್ಚಿಸಿ ಭಾರತದ ನಿರ್ಮಾಣದಲ್ಲಿ ಭಾಗಿಯಾಗಬೇಕು. ಇದರಿಂದ ದೇಶದಲ್ಲಿ ನಿರ್ಮಾಣವಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ದೂರವಾಗಿಸಲು ಪಣತೋಡಬೇಕು ಎಂದು ಸಲಹೆ ನೀಡಿದರು.

     ಈ ಸಂದರ್ಭದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್. ಮಲ್ಲೂರ್ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಯ ಕುರಿತು ಅಧ್ಯಕ್ಷರು, ಅಧಿಕಾರಿಗಳು ಸೇರಿದಂತೆ ಮಕ್ಕಳು ಪ್ರತಿಜ್ಞಾವಿಧಿ ಭೋಧಿಸಲಾಯಿತು.

     ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಐಲಿ, ಎಚ್.ಸಿ. ರಾಘವೇಂದ್ರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ ಕುಮಾರ್ ಕೆ.ಎಚ್, ವೈದ್ಯಾಧಿಕಾರಿ ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಎಸ್.ವಿ.ಅಂಕಲಯ್ಯ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ದುರ್ಗಪ್ಪ ಮಾಚನೂರ್, ಎಸ್ ಬೋಜರಾಜ್, ಕೃಷ್ಣ ನಾಯ್ಕ್ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link