ಬೆಂಗಳೂರು
ಬಿಸಿಯೂಟಕ್ಕೆ ಬಂದಿದ್ದ ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು ವಿಶ್ವನಾಥಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.ಗ್ರಾಮಸ್ಥರು ಹಿಡಿದುಕೊಟ್ಟ ದೇವನಹಳ್ಳಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಅಂಜನಮೂರ್ತಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೇಸಿಗೆ ರಜೆ ವೇಳೆಯು ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲೆಗೆ ಬಂದಿದ್ದ ಎಲ್ಲಾ ವಿದ್ಯಾರ್ಥಿಗಳು ಹೊರಟರೂ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಮನೆಗೆ ಕಳುಹಿಸದೇ ಶಿಕ್ಷಕ ಶಾಲೆಯಲ್ಲೇ ಆಕೆಯನ್ನು ಮೈ ಮೇಲೆ ಕೂರಿಸಿಕೊಂಡು ಮೈಕೈ ಗುಪ್ತಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
ಶಿಕ್ಷಕನ ವರ್ತನೆಯಿಂದ ಗಾಬರಿಗೊಂಡ ವಿದ್ಯಾರ್ಥಿನಿ ಶಾಲೆಯಿಂದ ಓಡಿ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ.ಕೂಡಲೇ ಶಾಲೆಗೆ ಬಂದ ಪೋಷಕರು ಹಾಗೂ ಗ್ರಾಮಸ್ಥರು ಅಂಜನಮೂರ್ತಿಗೆ ಹಿಗ್ಗಾಮುಗ್ಗಾ ಥಳಿಸಿ ವಿಶ್ವನಾಥಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








