ಬೆಂಗಳೂರು
ಬೆಂಗಳೂರು –ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಪಥಗಳನ್ನಾಗಿ ಮೇಲ್ದರ್ಜೆಗೇರಿಸುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈಸೂರಿನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಮದರು.
ಈ ಭಾಗದ ಆಕರ್ಷಣೀಯ ಕೇಂದ್ರವಾದ ಕೆ.ಆರ್.ಎಸ್.ಅನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ