ಬೆಂಗಳೂರು
ಗ್ರಾಂಡ್ ಫ್ಲಿಯಾ ಮಾರ್ಕೇಟ್ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಮೇ 3 ರಿಂದ ಮೇ 12 ರ ವರೆಗೆ ದೇಶದ ಎಲ್ಲಾ ಭಾಗಗಳ ಕಲಾವಿದರ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ “ಬೆಂಗಳೂರುಉತ್ಸವ” ವನ್ನು ಆಯೋಜಿಸಿದೆ.
ಬೆಂಗಳೂರು ಉತ್ಸವದ ಮೂಲಕ ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಈ ಮೇಳವು ಹೊಂದಿದೆ.
ಅದರಂತೆ ಬೆಂಗಳೂರಿನಲ್ಲಿ ಬೇಸಿಗೆ ರಜಾವನ್ನು ಗಮನದಲ್ಲಿಟ್ಟುಕೊಂಡು “ಬೆಂಗಳೂರು ಉತ್ಸವ-2019” ಸಮ್ಮರ್ ಶಾಪಿಂಗ್ ಕಾರ್ನಿವಲ್ ಮೇಳವನ್ನು ಮೇ 3 ರಿಂದ ಮೇ 12 ರ ವರೆಗೆ 10 ದಿವಸಗಳ ಕಾಲ ಚಿತ್ರಕಲಾ ಪರಿಷತ್ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 100 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಕರಕುಶಲ ಉತ್ಪನ್ನಗಳನ್ನು ಬೆಂಗಳೂರು ಜನತೆಯ ಮುಂದೆ ಪ್ರತಿದಿನ ಬೆಳಿಗ್ಗೆ 11 ರಿಂದ ರಾತ್ರಿ 7.30 ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.
ಇಲ್ಲಿ ಹುಲ್ಲಿನ ಹಾಸು, ಬೆಳ್ಳಿಯ ಸೂಕ್ಷ ಕೆತ್ತನೆಯ ಆಭರಣಗಳು, ಸೆಣಬಿನ ಚಪ್ಪಲಿ, ಅಂದದ ಆಟಿಕೆಗಳು, ಜವಳಿ ಮತ್ತು ಕಚೇರಿಗೆ ಉಪಯುಕ್ತ ಸಾಮಾಗ್ರಿಗಳು ಸೇರಿದಂತೆ ಅನೇಕ ಕರಕುಶಲ ವಸ್ತುಗಳು ಲಭ್ಯವಿದೆ. ಈ ಮೇಳದ ಮುಖ್ಯ ಉದ್ದೇಶಸಾಂಪ್ರದಾಯಿಕ ಕಲಾಕೌಶಲ್ಯವನ್ನು ಬಳಸಿ ಆಧುನಿಕ ಜೀವನ ಶೈಲಿಗೆ ತಕ್ಕ ಉತ್ಪನ್ನಗಳನ್ನು ತಯಾರಿಸುವುದಾಗಿದೆ.
ಪುರಾನಾ ಸಾಹು ಅವರ ಕಣ್ಮನಸೆಳೆಯುವ ಪುರಾತನ ಹಿತ್ತಾಳೆಯ ಕರಕುಶಲವಸ್ತುಗಳು. ಅಲ್ಲದೆ ಅವರ ಸೌರಚಿತ್ರಕಲಾಕೃತಿಗಳು ಇಲ್ಲಿ ಲಭ್ಯ. ಪೌರ್ಣ ಚಂದ್ರ ಮೊಹಪಾತ್ರ ಅವರ ಬೆಳ್ಳಿಯ ಆಭರಣಗಳು ಆಧುನಿಕತೆಯ ಹಿನ್ನಲೆಯಲ್ಲಿ ಪುರಾತನ ಸೊಬಗನ್ನು ಬಿಂಬಿಸಲಿವೆ. ಪೆಂಡೆಟ್‍ಗಳು, ಬಳೆಗಳು, ಹೇರ್ ಪಿನ್‍ಗಳು ಅಲ್ಲದೆ ಮುತ್ತಿನ ಆಭರಣದಕುಂಕುಮ ಬಾಕ್ಸ್‍ಗಳು ಇಲ್ಲಿ ಲಭ್ಯವಿವೆ.
ಪರಿಸರ ಸ್ನೇಹಿ ಕರಕುಶಲ ವಸ್ತುಗಳಾದ ಮಧುಕಾಟಿ ಗ್ರಾಸ್ ರನ್ನರ್ಸ್, ಟೇಬಲ್ ಮತ್ತು ನೆಲದ ಮೇಲೆ ಹಾಸುವಂತಹ ಮ್ಯಾಟ್‍ಗಳು ಹಾಗೂ ಗೋಡೆಯ ಮೇಲೆ ನೇತು ಹಾಕುವ ಮ್ಯಾಟ್‍ಗಳು ಇಲ್ಲಿ ಲಭ್ಯವಿವೆ. ಮಧುಬನಿ ಕಲಾ ಪ್ರಕಾರದವಸ್ತುಗಳು ಇಲ್ಲಿ ಲಭ್ಯವಿವೆ. ರಾಹುಲ್ ಸೇನ್‍ಗುಪ್ತ ಅವರ ರಚಿತ ಸೆಣಬಿನಿಂದ ತಯಾರಿಸಲ್ಪಟ್ಟ ಚಪ್ಪಲಿಗಳು ಇಲ್ಲಿ ಲಭ್ಯವಿವೆ.
ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‍ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‍ಗಳು ಮತ್ತು ಬೆಡ್‍ಶೀಟ್‍ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲ್ಲಿ ದೊರಕುತ್ತದೆ.
ಆದುದರಿಂದ ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು 10 ದಿವಸಗಳ ಈ ವಿಶಿಷ್ಟ ಬೆಂಗಳೂರು ಉತ್ಸವ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಉತ್ಪಾದಕರನ್ನುಪ್ರೋತ್ಸಾಹಿಸಬೇಕೆಂದು ಈ ಮೂಲಕ ಕೋರಲಾಗಿದೆ. ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ.