ಬೆಂಗಳೂರು
ಬೈಕ್‍ನಲ್ಲಿ ಹೋಗುತ್ತಿದ್ದ ಆಕ್ಸಿಸ್ ಬ್ಯಾಂಕ್‍ನ ಸಹಾಯಕ ಮ್ಯಾನೇಜರ್ ವಿನಾಯಕ್ ಕುಲಕರ್ಣಿ ಅವರು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಧಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಮೂಲದ ವಿನಾಯಕ್ ಕುಲಕರ್ಣಿ (45) ಗೊಟ್ಟಿಗೆರೆಯಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದು ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದ ಆಕ್ಸಿಸ್ ಬ್ಯಾಂಕ್‍ನಲ್ಲಿ ಸಹಾಯಕ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.ಬ್ಯಾಂಕ್ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಿದ್ದ ಕುಲಕರ್ಣಿ ಅವರು, ರಾತ್ರಿ 10.50ರ ವೇಳೆ ತುರ್ತು ಕೆಲಸದ ಮೇಲೆ ಮತ್ತೆ ಬ್ಯಾಂಕ್‍ಗೆ ಅಪಾಚೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ನೈಸ್ ರಸ್ತೆ ಬಳಿ ನಿಲ್ಲಿಸಿದ್ದ ಲಾರಿಗೆ ಕತ್ತಲಲ್ಲಿ ಸರಿಯಾಗಿ ಕಾಣದೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಕುಲಕರ್ಣಿ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು, ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಜಗದೀಶ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








