ಹೊನ್ನಾಳಿ:
ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಜೆ ಬೆಲ್ಲದ ಬಂಡಿ ಉತ್ಸವ ನೆರವೇರಿಸಲಾಯಿತು.ಸೋಮವಾರ ರಾತ್ರಿಯಿಂದಲೇ ರಥೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಗ್ರಾಮದ ಮುತ್ತೈದೆಯರು ವಿವಿಧ ವಾದ್ಯಮೇಳಗಳೊಂದಿಗೆ ದೇವಾಲಯಕ್ಕೆ ತೆರಳಿ ತಂತಮ್ಮ ಶಕ್ತ್ಯಾನುಸಾರ ಸೇವೆ ಸಲ್ಲಿಸಿದರು.
ಬೆನಕನಹಳ್ಳಿಯ ಶ್ರೀ ಬೆನಕೇಶ್ವರ ಸ್ವಾಮಿ, ಬೀರಗೊಂಡನಹಳ್ಳಿಯ ಶ್ರೀ ದಂಗಾಳಿ ಬಸವೇಶ್ವರ ಸ್ವಾಮಿ, ಚಿಕ್ಕಬಾಸೂರಿನ ಮೂಕಬಸವಣ್ಣ ಸ್ವಾಮಿ ಮತ್ತು ಮಾರಮ್ಮ ದೇವಿ ಉತ್ಸವ ಮೂರ್ತಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದವು.ರಥೋತ್ಸವಕ್ಕೆ ಆಗಮಿಸಿದ ಎಲ್ಲ ಭಕ್ತರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವಕ್ಕೆ ದಾವಣಗೆರೆ, ಶಿವಮೊಗ್ಗ, ಹಾವೇರಿ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ಗ್ರಾಮಗಳ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಆಗಮಿಸಿದ್ದರು. ಹರಕೆ ಹೊತ್ತ ಭಕ್ತರು ಕುಟುಂಬದವರೊಂದಿಗೆ ಆಗಮಿಸಿ ಸ್ವಾಮಿಯ ಸನ್ನಿಧಿಯಲ್ಲಿ ವಿವಿಧ ಸೇವೆ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
