ಹಾವೇರಿ
ಜಾನಪದ ವಿವಿ ಆವರಣದಲ್ಲಿ ನಿವೇಶನ ಒದಗಿಸಿದರೆ ಹೊಸ ಸ್ನಾತಕೋತ್ತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರು ಮಾಡಿಸುವುದಾಗಿ ಗೃಹ, ಸಹಕಾರಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿರಾದ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.
ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ 323 ಲಕ್ಷ ರೂ. ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಸ್ನಾತಕೋತ್ತರ ಮೆಟ್ರಿಕ್ ನಂತರದ ಮಹಿಳಾ ವಿದ್ಯಾರ್ಥಿನಿಲಯದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮೂಲ ಸೌಕರ್ಯಗಳ ಕೊರತೆ ಎದುರಿಸುವ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಶೀಘ್ರವೇ ಮೂಲ ಸೌಕರ್ಯ ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಅಗತ್ಯ ಅನುದಾನವನ್ನು ಜಿಲ್ಲೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಸಮಾರಂಭದಲ್ಲಿ ಜಾನಪದ ವಿಶ್ವವಿದ್ಯಾಲಯದ ಉಪ ಕುಲತಿಗಳಾದ ಡಿ.ಬಿ.ನಾಯಕ್, ಕುಲಸಚಿವ ಪ್ರೊ. ಚಂದ್ರಶೇಖರ, ಜಿ.ಪಂ.ಸದಸ್ಯ ಬಸನಗೌಡ ದೇಸಾಯಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಎ. ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕುಂದೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ, ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಬಿ.ಪುರಾಣಿಕ, ಸವಣೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಮಂಜುನಾಥ ಮರಿತಮ್ಮಣ್ಣನವರ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ