ಬೆಂಗಳೂರು:
ರಾಜ್ಯದ ಏಳು ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳು ಎಂದು ಅಕ್ಟೋಬರ್ 2 ರಂದು ಘೋಷಣೆ ಮಾಡುತ್ತಿದ್ದು, ಈ ಮೂಲಕ 27 ಜಿಲ್ಲೆಗಳು ಬಯಲು ಶೌಚಾಲಯ ಮುಕ್ತವಾಗಿವೆ.
ತುಮಕೂರು, ಚಿತ್ರದುರ್ಗ, ಯಾದಗಿರಿ, ಕಲಬುರಗಿ, ಬಳ್ಳಾರಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳು ಬಯಲು ಬಹಿರ್ದೆಸೆ ಮುಕ್ತವಾಗುತ್ತಿವೆ.
ರಾಜ್ಯದ ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳು ಮಾತ್ರ ಬಯಲು ಶೌಚ ಮುಕ್ತ ಜಿಲ್ಲೆಗಳನ್ನಾಗಿ ಘೋಷಣೆ ಮಾಡಲು ನವೆಂಬರ್‍ವರೆಗೆ ಕಾಯಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಸ್ವಚ್ಚ ಭಾರತ ಅಭಿಯಾನದಡಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 20 ಜಿಲ್ಲೆಗಳನ್ನು ಬಯಲು ಬರ್ಹಿದೆಸೆ ಮುಕ್ತ ಜಿಲ್ಲೆ ಎಂದು ಘೋಷಿಸಲಾಗಿತ್ತು. ಬಹುಶ: ನವೆಂಬರ್-1 ರಂದು ಉಳಿದ ಮೂರು ಜಿಲ್ಲೆಗಳು ಬಯಲು ಬಹಿರ್ದೆಸೆ ಮುಕ್ತವಾಗಲಿದೆ ಎಂದರು.
ಆಯ್ದ ಹಳ್ಳಿಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಕಾರ್ಯ ಯೋಜನೆ ರೂಪಿಸಲಾಗಿದೆ. ಇದನ್ನು ದೊಡ್ಡ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗುವುದು , ಈ ಹಳ್ಳಿಗಳಲ್ಲಿ ಪ್ರತ್ಯೇಕ ಪ್ಲಾಸ್ಟಿಕ್ ಸಂಗ್ರಹಣೆ ಹಾಗೂ ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆಗೆ ಯೋಜನೆ ರೂಪಿಸಲಾಗಿದೆ ಹಂತ ಹಂತವಾಗಿ ಇದನ್ನು ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ