ಇಂದು ಬಿಬಿಎಂಪಿ ಬಜೆಟ್ ಮಂಡನೆ…!!!!

ಬೆಂಗಳೂರು 

        2019-20ನೇ ಸಾಲಿನ ಬಿಬಿಎಂಪಿ ಬಜೆಟ್ ಇಂದು ಮಂಡನೆಯಾಗಲಿದ್ದು, ಈ ಬಾರಿ ಮಹಿಳಾ ವಲಯಕ್ಕೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆಗಳಿವೆ.

       ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತದ ಬಿಬಿಎಂಪಿ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಬಜೆಟ್ ಮಂಡಿಸುತ್ತಿರುವುದು ವಿಶೇಷ. ಈ ಹಿಂದೆ ಮಹಾನಗರ ಪಾಲಿಕೆಯಿದ್ದಾಗ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಲಲಿತಾ ಶ್ರೀನಿವಾಸಗೌಡ ಅವರು ಬಜೆಟ್ ಮಂಡಿಸಿದ್ದರು.

       ಪ್ರಸಕ್ತ ಸಾಲಿನ ಬಜೆಟ್ನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಅವರು ಮಂಡಿಸಲಿದ್ದಾರೆ. ಈ ಬಾರಿ ಮೇಯರ್ ಗಂಗಾಂಬಿಕೆ ಹಾಗೂ 12 ಸ್ಥಾಯಿ ಸಮಿತಿಗಳ ಪೈಕಿ 7 ಮಂದಿ ಮಹಿಳೆಯರೇ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಮಹಿಳಾ ಸದಸ್ಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ, ಈ ಬಾರಿ ಮಹಿಳೆಯರ ವಲಯಕ್ಕೆ ಹೆಚ್ಚಿನ ಅನುದಾನ ಹರಿದು ಬರಲಿದೆ.

      ಹೇಮಲತಾ ಗೋಪಾಲಯ್ಯ ಅವರು ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ನ್ನು ಸಿದ್ಧಪಡಿಸುವ ಕಸರತ್ತು ನಡೆಸಿದ್ದಾರೆ. ಅವರದೇ ಪಕ್ಷದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಮಾದರಿಯಲ್ಲಿಯೇ ಸಾಮಾನ್ಯ ಜನರನ್ನು ಸಂತೃಪ್ತಿ ಪಡಿಸಲು ಹಲವಾರು ಕಾರ್ಯಕ್ರಮಗಳನ್ನು ಬಜೆಟ್‍ನಲ್ಲಿ ಅಳವಡಿಸಲು ಪ್ರಯತ್ನ ನಡೆಸಿದ್ದಾರೆ.

      ನಗರದಲ್ಲಿ ಉದ್ಯಮವನ್ನು ಪ್ರೋತ್ಸಾಹಿಸಲು ಮಹಿಳಾ ಉದ್ಯಮಿಗಳಿಗೆ ಕಿರು ಸಾಲವನ್ನು ನೀಡುವುದು, ಪಾಲಿಕೆಯ ಆಸ್ಪತ್ರೆಗಳಲ್ಲಿ ಜನಿಸಿದ ಹೆಣ್ಣು ಮಗುವಿಗೆ ವಿಶೇಷ ಹಣಕಾಸು ನೆರವು, ಪ್ರತಿ ವಾಡ್ರ್ನಲ್ಲಿ 20 ರಂತೆ ಮಹಿಳೆಯರಿಗೆ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ನೀಡುವುದು, ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ನೀಡುವ ಮೂಲಕ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಪ್ರಕಟಿಸಲಿದ್ದಾರೆ.

        ವಿವಿಧ ದಾಸೋಹಿ ಡಾ. ಶಿವಕುಮಾರಸ್ವಾಮೀಜಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿ ಪಾಲಿಕೆ ವತಿಯಿಂದಲೇ ಅತ್ಯುತ್ತಮ ಶಿಕ್ಷಣ ಸಂಸ್ಥೆಗೆ ಪ್ರಶಸ್ತಿ ನೀಡುವುದು ಈ ಬಾರಿಯ ಬಜೆಟ್ನಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap