ಯುವ ವಕೀಲೆ ಹತ್ಯೆ ಪ್ರಕರಣ : ಬಿಬಿಎಂಪಿ ಕಾರ್ಪೋರೆಟರ್ ಬಂಧನ..!!

ಬೆಂಗಳೂರು

       ಇತ್ತೀಚಿಗೆ ನಡೆದಿದ್ದ ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಪಾಲಿಕೆ ಸದಸ್ಯ ವಿ.ಸುರೇಶ್‍ನನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿಐಡಿ ಪೊಲೀಸರು ಆತ್ಮಹತ್ಯೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ
ತಮಿಳುನಾಡಿನ ಸೇಲಂ ಬಳಿಯ ಎರ್ರಾಕಾಡ್ ರೆಸಾರ್ಟ್‍ನಲ್ಲಿದ್ದ ಎ.ನಾರಾಯಣಪುರದ ಕಾರ್ಪೋರೇಟರ್ ವಿ.ಸುರೇಶ್‍ನನ್ನು ಪೊಲೀಸರು ಶುಕ್ರವಾರ ಸಂಜೆ ಬಂಧಿಸಿ ನಗರಕ್ಕೆ ಕರೆತಂದು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

        ಕೊರಮಂಗಲದಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಯನ್ನು ಹಾಜರು ಪಡಿಸಿದ್ದರು.ಸದ್ಯಕ್ಕೆ ಆರೋಪಿಗೆ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.ಮೃತ ವಕೀಲೆ ಧರಣಿ ಕುಟುಂಬಕ್ಕೆ ಕಿರುಕುಳ ನೀಡಿರುವ ಆರೋಪವನ್ನು ಎದುರಿಸುತ್ತಿರುವ ಕಾರ್ಪೋರೇಟರ್ ಸುರೇಶ್ ಕಳೆದ ಮೂರು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದರು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು ಆರೋಪಿ ತಮಿಳುನಾಡಿನ ಸೇಲಂ ಬಳಿಯಿರುವ ಎರ್ರಾಕಾಡ್ ಎಂಬ ರೆಸಾರ್ಟ್‍ನಲ್ಲಿ ಅಡಗಿರುವ ಖಚಿತ ಮಾಹಿತಿ ಪಡೆದು ತಮಿಳುನಾಡಿಗೆ ತೆರಳಿ ಆರೋಪಿಯನ್ನು ಬಂಧಿಸಿ ಕರೆ ತಂದಿದ್ದಾರೆ.

      ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗೆಂದು ಪೊಲೀಸರು ಸುರೇಶ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಕೆಲ ತಿಂಗಳ ಹಿಂದೆ ಮನೆಯೊಂದರಲ್ಲಿ ವಕೀಲೆ ಧರಣಿ ನೇಣು ಬಿಗಿದುಕೊಂಡ ರೀತಿಯಲ್ಲಿ ಅನುಮಾನಾಸ್ಪದ ವಾಗಿ ಸಾವನ್ನಪ್ಪಿದ್ದರು.ಈ ಕೇಸಿಗೆ ಸಂಬಂಧಿಸಿದಂತೆ ಈವರೆಗೂ 11 ಜನ ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link