ಗಂಗಾವತಿ:
ವಿಧಾನಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಸೀಮಿತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಊಸರವಳ್ಳಿ ವ್ಯಕ್ತಿತ್ವದವರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದರು.ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಕಾಂಗ್ರೆಸ್ ನಲ್ಲಿ ಇದ್ದಾಗ ಯಾವುದೇ ಆರೋಪ ಮಾಡುತ್ತಿರಲಿಲ್ಲ. ಆದರೆ ಬಿಜೆಪಿ ಪಕ್ಷಕ್ಕೆ ಅವರು ಬರುತ್ತಿದ್ದಂತೆಯೇ ಗಣಿ ಹಗರಣ ಎಂದು ಖ್ಯಾತೆ ತೆಗೆಯುತ್ತಿದ್ದಾರೆ ಎಂದು ಹೇಳಿದರು.
ಊಸರವಳ್ಳಿ ಕೇವಲ ತನ್ನ ಜೀವ ರಕ್ಷಣೆಗೆ ಬಣ್ಣ ಬದಲಿಸುತ್ತದೆ. ಆದರೆ ಸಿದ್ದರಾಮಯ್ಯ ಹಗಲು ಒಂದು ರೀತಿ ಸಂಜೆ ಒಂದು ರೀತಿ ಬಣ್ಣ ಬದಲಿಸುವ ಮೂಲಕ ತಮ್ಮ ನಿಜ ಬಣ್ಣ ಬಯಲು ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂದ ಪಾಟೀಲ್, 17 ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲ್, ಆಳ್ವಾ ಯಾರು?. ಸಧ್ಯ ಇರುವ ಕಾಂಗ್ರೆಸ್ ಶಾಸಕರನ್ನು ಉಳಿಸಿಕೊಂಡರೆ ಸಾಕು. ಮೊದಲು ಈ ಬಗ್ಗೆ ಕಾಂಗ್ರೆಸ್ ಗಮನ ಹರಿಸಬೇಕು ಎಂದು ಪಾಟೀಲ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
