ಅರ್ಥಪೂರ್ಣ ಕರ್ನಾಟಕ ರಾಜ್ಯೋತ್ಸವ ಸಿದ್ಧತೆಗೆ ಡಿಸಿ ಡಾ.ವೆಂಕಟೇಶ್ ಸೂಚನೆ

0
32

ಹಾವೇರಿ

        ಕನ್ನಡ ಸಾಂಸ್ಕತಿಕ ವೈಭವವನ್ನು ಸ್ಮರಣೆಯ ನಿಟ್ಟಿನಲ್ಲಿ ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸುವ ಕುರಿತಂತೆ ಸಿದ್ಧತೆಯನ್ನು ಕೈಗೊಳ್ಳುವಂತೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಸೂಚಿಸಿದರು.

      ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಸಮನ್ವಯದಿಂದ ಆಯೋಜಿಸುವಂತೆ ಸೂಚಿಸಿದರು.

       ಸ್ವಚ್ಛತೆಯ ಸಂಸ್ಕತಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳುವುದರ ಮೂಲಕ ವಿಶಿಷ್ಟವಾಗಿ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಹಾಗೂ ವಿವಿಧ ಇಲಾಖೆಗಳಲ್ಲಿ ಆಚರಿಸಬೇಕು ಎಂದು ಸೂಚಿಸಿದರು.

     ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸುವ ಸಾಂಸ್ಕತಿಕ ಕಾರ್ಯಕ್ರಮಗಳು ಅತ್ಯಂತ ವಿಭಿನ್ನವಾಗಿರಬೇಕು. ಕನ್ನಡ ನಾಡು-ನುಡಿ ಸಂಸ್ಕತಿಯನ್ನು ಪ್ರತಿಬಿಂಬಿಸಬೇಕು. ಯಾವುದೇ ಸಿನಿಮಾ ಹಾಡು ಅಬ್ಬರದ ಸಂಗೀತಕ್ಕೆ ನೃತ್ಯ ಹಾಗೂ ಡ್ರಿಲ್ ಕಾರ್ಯಕ್ರಮಗಳನ್ನು ಆಯೋಜಿಸದೇ ಅತ್ಯಂತ ಸದಭಿರುಚಿಯ ಹಾಗೂ ನಾಡಿನ ಸಂಸ್ಕತಿಯನ್ನು ಬಿಂಬಿಸುವ ಕಾರ್ಯಕ್ರಮವನ್ನು ಆಯೋಜಿಸಬೇಕು.

      ಪ್ರೌಢಶಾಲಾ ಮಕ್ಕಳೊಂದಿಗೆ ಕಾಲೇಜು ವಿದ್ಯಾರ್ಥಿಗಳ ತಂಡ, ಹಾಸ್ಟೇಲ್ ವಿದ್ಯಾರ್ಥಿಗಳ ತಂಡಗಳಿಗೆ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶಿಸಲು ಅವಕಾಶ ಕಲ್ಪಿಸಬೇಕು. ಅತ್ಯಂತ ವ್ಯವಸ್ಥಿತವಾಗಿ ಸಾಂಸ್ಕøತಿಕ ತಂಡಗಳನ್ನು ಆಯ್ಕೆಮಾಡಿ ತರಬೇತಿ ನೀಡಬೇಕು ಹಾಗೂ ಸಂಜೆ ಗುರುಭವನದಲ್ಲಿ ವಿಭಿನ್ನ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿಯನ್ನು ರಚಿಸಲಾಯಿತು.

     ನಗರದ ಮೈಲಾರ ಮಹದೇವ ವೃತ್ತದಿಂದ ವಿವಿಧ ಇಲಾಖೆಗಳ ಸ್ಥಬ್ಧಚಿತ್ರಗಳು ವಿದ್ಯಾರ್ಥಿಗಳು, ಕಲಾತಂಡಗಳೊಂದಿಗೆ ಆಕರ್ಷಕ ಮೆರವಣಿಗೆ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಶಿಸ್ತುಬದ್ಧವಾಗಿ ಕ್ರೀಡಾಂಗಣದಲ್ಲಿ ಸೇರಬೇಕು. ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಎಲ್ಲ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.

       ಕಾರ್ಯಕ್ರಮದಲ್ಲಿ ವೇದಿಕೆ ಅಲಂಕಾರ, ಅತಿಥಿಗಳಿಗೆ, ಗಣ್ಯರಿಗೆ, ಸಾರ್ವಜನಿಕರಿಗೆ ಸೂಕ್ತ ಆಸನ ವ್ಯವಸ್ಥೆ, ವಿಶೇಷವಾಗಿ ಧ್ವಜಾರೋಹಣ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ವ್ಯವಸ್ಥೆಕೈಗೊಳ್ಳಲು ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕನ್ನಡ ನಾಡಿಗಾಗಿ ವಿಶಿಷ್ಟ ಸಾಧನೆಮಾಡಿದ ಮಹನೀಯರಿಗೆ ರಾಜ್ಯೋತ್ಸವ ದಿನದಂದು ಗೌರವಿಸಿ ಸನ್ಮಾನಿಸಲು ಆಯ್ಕೆಗಾಗಿ ಸಮಿತಿಯನ್ನು ರಚಿಸಲಾಯಿತು.

       ಅಪರ ಜಿಲ್ಲಾಧಿಕಾರಿ ವಿನೋದ ಹೆಗ್ಗಳಗಿ, ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಿಕಟ್ಟಿ, ಜಿಲ್ಲಾ ಪಂಚಾಯತಿ ಸಹಕಾರ್ಯದಶಿಘ ಜಾಫರ ಸುತಾರ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಪೌರಾಯುಕ್ತ ಪ್ರಕಾಶ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜೋಷಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here