ತುಮಕೂರು
2019ರ ಲೋಕಸಭಾ ಚುನಾವಣೆ ಕುರಿತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಲ್ಲಿರುವ 176 ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಬೀದಿ ನಾಟಕ ಪ್ರದರ್ಶನಗಳ ಮೂಲಕ ಮತದಾರರಿಗೆ ಅರಿವು ಮೂಡಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಶೇ. 100ರಷ್ಟು ಮತದಾನವಾಗಬೇಕು ಎಂಬ ಉದ್ದೇಶದಿಂದ ಮತದಾನದ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯ್ಕೆಗೊಂಡಿರುವ 8 ಬೀದಿ ನಾಟಕ ಕಲಾತಂಡಗಳನ್ನು ಬಳಸಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಬೀದಿ ನಾಟಕದ ಮೂಲಕ ಮತದಾರರಿಗೆ ಅರಿವು ಮೂಡಿಸುವ ಮಹತ್ವದ ಕಾರ್ಯವನ್ನು ಮಾಡುತ್ತಿದೆ.
ಈ ಬೀದಿನಾಟಕ ಕಲಾತಂಡಗಳು ಪ್ರತಿದಿನ 3 ಪ್ರದರ್ಶನಗಳನ್ನು ಮತಗಟ್ಟೆ ಕೇಂದ್ರಗಳಲ್ಲಿ ಪ್ರದರ್ಶಿಸುತ್ತಿದ್ದು, ಪ್ರಜಾಪ್ರಭುತ್ವದಲ್ಲಿ ಮತದಾನವು ಮಹತ್ವದ ಕಾರ್ಯವಾಗಿದ್ದು, ಈ ಕಾರ್ಯವನ್ನು ಕಡ್ಡಾಯವಾಗಿ ಮಾಡಬೇಕು ಎಂಬುದನ್ನು ಬೀದಿ ನಾಟಕದ ಮೂಲಕ ಕಲಾವಿದರು ಮನೋಜ್ಞವಾಗಿ ಅಭಿನಯಿಸಿ ಅರಿವು ಮೂಡಿಸುತ್ತಿದ್ದಾರೆ.
ಚುನಾವಣೆಯಲ್ಲಿ ನಡೆಸುವ ಅಕ್ರಮಗಳನ್ನು ವಿಡಿಯೋ/ ಪೋಟೋ ಸೆರೆ ಹಿಡಿದು ಮೊಬೈಲ್ ಆಫ್ ಮೂಲಕ ಆಯೋಗಕ್ಕೆ ಕಳುಹಿಸುವ ‘ಸಿ-ವಿಜಿಲ್’ ಬಗ್ಗೆಯು ಕಲಾವಿದರು ಬೀದಿ ನಾಟಕದ ಮೂಲಕ ಪ್ರದರ್ಶಿಸಿ ಅರಿವು ಮೂಡಿಸಲಾಗುತ್ತಿದೆ.
ಬೀದಿ ನಾಟಕದ ಜೊತೆಯಲ್ಲಿಯೇ ಪ್ರಾತ್ಯಕ್ಷಿಕೆ ತಂಡಗಳು ಇವಿಎಂ ಮತ್ತು ವಿವಿಪ್ಯಾಟ್ ಬಗ್ಗೆ ಅರಿವು ಮೂಡಿಸುತ್ತಿವೆ. ಒಟ್ಟಾರೆ ಜಿಲ್ಲೆಯಲ್ಲಿ ಏಪ್ರಿಲ್ 18ರಂದು ನಡೆಯುವ ಚುನಾವಣಾ ಮತದಾನ ದಿನದಂದು ಎಲ್ಲಾ ಮತದಾರರು ಮತಗಟ್ಟೆಗೆ ಆಗಮಿಸಿ ಶೇ.100ರಷ್ಟು ಮತದಾನ ಮಾಡಬೇಕು ಎಂಬುದು ಸ್ವೀಪ್ ಸಮಿತಿ ಉದ್ದೇಶವಾಗಿದೆ. ಇದಕ್ಕಾಗಿ ಬೀದಿನಾಟಕ, ಮತ್ತಿತರ ಪ್ರಚಾರ/ ಅರಿವು ಕಲಾ ಪ್ರಕಾರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ಶುಭಾ ಕಲ್ಯಾಣ್ ಅವರು ಹೇಳುತ್ತಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
