ಹುಳಿಯಾರು:
ಹುಳಿಯಾರು ಹೋಬಳಿ ಯಳನಡು ಗ್ರಾಮದಲ್ಲಿ ಶ್ರೀ ಸಿದ್ಧರಾಮೇಶ್ವರ ಸ್ವಾಮಿಯವರ ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಬೆಳ್ಳಿ ಬಸವನೋತ್ಸವವು ಅಪಾರ ಭಕ್ತ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಗ್ರಾಮ ದೇವತೆಗಳದ ಶ್ರೀ ಕರಿಯಮ್ಮದೇವಿ ಮತ್ತು ಶ್ರೀ ಬಂದಮ್ಮದೇವರುಗಳೊಂದಿಗೆ ಶ್ರೀ ಸ್ವಾಮಿಯವರ ಬೆಳ್ಳಿ ಬಸವನುತ್ಸವವನ್ನು ಊರಿನ ಪ್ರಮುಖ ಬೀದಿಯಲ್ಲಿ ನಡೆಸಲಾಯಿತು. ಮಹಿಳಾ ವೀರಗಾಸೆ ಉತ್ಸವಕ್ಕೆ ಮೆರಗು ತಂದಿತ್ತು.
ಉತ್ಸವದ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು, ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸಿ ಹಣ್ಣುಕಾಯಿ ಮಾಡಿಸಿಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ