ಹಾವೇರಿ
ಹಾವೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾದ ‘ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ’(ಬೇಟಿ ಬಚಾವೋ ಬೇಟಿ ಪಡಾವೋ) ಜಾಗೃತಿ ಜಾಥಾಕ್ಕೆ ಬುಧವಾರ ನಗರದಲ್ಲಿ ಶಾಸಕರಾದ ನೆಹರು ಓಲೇಕಾರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೆಣ್ಣು ಮಗುವಿನ ರಕ್ಷಣೆ ಬಗ್ಗೆ, ಹೆಣ್ಣು ಮಗುವಿನ ಶಿಕ್ಷಣ ಬಗ್ಗೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಘೊಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಉಮಾ ಕೆ.ಎಸ್. ಮಹಿಳಾ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು ಇತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ