ಬಳ್ಳಾರಿ
ಜಿಲ್ಲಾಡಳಿತ ವತಿಯಿಂದ ಭಗವನ್ ಮಹಾವೀರ್ ಜಯಂತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧುವಾರ ಸರಳವಾಗಿ ಆಚರಣೆ ಮಾಡಲಾಯಿತು.
ಲೋಕಸಭಾ ಚುನಾವಣಾ-2019 ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಗವನ್ ಮಹಾವೀರ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಭಗವನ್ ಮಹಾವೀರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ನಾಗರಾಜ್, ಜೈನ್ ಸಂಘದ ಜಿಲ್ಲಾಧ್ಯಕ್ಷ ಭಾಗೂಚಿ ಹಾಗೂ ಗಣ್ಯವ್ಯಕ್ತಿಗಳು ಸೇರಿದಂತೆ ಸಮಾಜದ ಮುಖಂಡರು ಇದ್ದರು.