ಶ್ರೀ ಭಗೀರಥ ಜಯಂತಿ ಆಚರಣೆ

ಬಳ್ಳಾರಿ

      ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಭಗೀರಥ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಶ್ರೀ ಭಗೀರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.

     ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ಭಗೀರಥ ಸಮಾಜದ ಮುಖಂಡರಾದ ಯರ್ರಿಸ್ವಾಮಿ, ದುರ್ಗೇಶ, ಶ್ರೀನಿವಾಸ್ ಸೇರಿದಂತೆ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap