ಭವಿಷ್ಯದ ಜೀವನಕ್ಕಾಗಿ ಕಾಡು ಉಳಿಸಿ

ತುಮಕೂರು

    ನಮ್ಮ ಮುಂದಿನ ಭವಿಷ್ಯದ ಜೀವನಕ್ಕಾಗಿ ಪರಿಸರದ ಜತೆಗೆ ನೈಸರ್ಗಿಕ ಅರಣ್ಯ ಪ್ರದೇಶವನ್ನು ಉಳಿಸಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಣೇಶ್ ಕಿವಿಮಾತು ಹೇಳಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಏರ್ಪಡಿಸಿದ್ದ “ವಿಶ್ವ ಭೂ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಮಾಲಿನ್ಯದಿಂದ ಪ್ರಾಕೃತಿಕ ವಿಪತ್ತು ಸಂಭವಿಸುತ್ತಿದ್ದು, ಕುಡಿಯುವ ನೀರಿಗೆ ಅಭಾವ ಉಂಟಾಗುತ್ತಿದೆ. ಪರಿಸರ ಮಾಲಿನ್ಯ ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ನೀರು ಸಾಕಷ್ಟಿದೆ ಎಂದು ಪೊಲು ಮಾಡುವುದು ಒಳಿತಲ್ಲ. ಮಿತವಾಗಿ ಬಳಸಬೇಕು. ಸಸ್ಯ ಸಂಪತ್ತು, ಜಲಸಂಪತ್ತು ಅತಿ ಅಮೂಲ್ಯ ಅದನ್ನು ಕಾಪಾಡುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಮಾನವನಿಗೆ ಶುದ್ಧ ಗಾಳಿ, ನೀರು, ಅಹಾರವನ್ನು ಪರಿಸರ ನೀಡುತ್ತಿರುವುದರಿಂದ ಪ್ರತಿಯೊಬ್ಬರೂ ನೆಲ, ಜಲವನ್ನು ರಕ್ಷಣೆ ಮಾಡಬೇಕು. ಮಾಲಿನ್ಯಕ್ಕೆ ಕಡಿವಾಣ ಇಲ್ಲದ ಕಾರಣ ವಾತಾವರಣ ಹೆಚ್ಚಾಗಿ ಕಲುಷಿತಗೊಳ್ಳುತ್ತಿದೆ. ಮನುಷ್ಯನ ಸ್ವಾರ್ಥಕ್ಕೆ ಪರಿಸರ ಬಲಿಯಾಗುತ್ತಿದೆ. ಪರಿಸರಕ್ಕೆ ಹಾನಿಯಗುವ ಪ್ಲಾಸ್ಟಿಕ್, ವಿಷಪೂರಿತ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಬೇಕು. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆಯಾಗಬೇಕೆಂದರೆ ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಒಂದಾದರೂ ಸಸಿ ನೆಟ್ಟು ಪೋಷಣೆ ಮಾಡಬೇಕು ಎಂದು ಅವರು ತಿಳಿಸಿದರು.

      ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಿ.ಕೃಷ್ಣಪ್ಪ ಮಾತನಾಡಿ ನಾವು ನಿಂತ ನೆಲವನ್ನೇ ನಾಶ ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ಭೂಮಿಯನ್ನು ರಕ್ಷಣೆ ಮಾಡಬೇಕಿದೆ ಅದು ಚೆನ್ನಾಗಿದ್ದರೆ ಮಾತ್ರ ನಾವು ಉತ್ತಮವಾದ ಗಾಳಿ ಸವಿಯಲು ಸಾಧ್ಯ, ಇಲ್ಲದಿದ್ದರೆ ಆರೋಗ್ಯದಲ್ಲಿ ಏರುಪೇರಾಗುತ್ತದೆ ಎಂದು ತಿಳಿಸಿದರು.

       ಈ ಸಂದರ್ಭದಲ್ಲಿ “ನಾವು ಮನುಷ್ಯರು ಪ್ರಕೃತಿಯ ಜೀವಿಗಳು ಪ್ರಕೃತಿಯ ಎಲ್ಲಾ ಹೋಗುಗಳು ನಮ್ಮ ಜವ್ದಾರಿಯಾಗಿದೆ. ಅದನ್ನು ಅರಿತು ಉಳಿಸುವುದು ನಮ್ಮ ಧರ್ಮ” ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ||ಎಸ್. ಪ್ರೇಮ್‍ಕುಮಾರ್(ಆಡಳಿತ), ಮುಖ್ಯ ಯೋಜನಾಧಿಕಾರಿ ಬಾಲರಾಜು, ಮುಖ್ಯ ಲೆಕ್ಕಾಧಿಕಾರಿ ಕನಕರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಸೇರಿದಂತೆ ಅಧಿಕಾರಿ, ಸಿಬ್ಬಂದಿವರ್ಗದವರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap