ಭವ್ಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಬೆಂಬಲಿಸಿ

ಹುಳಿಯಾರು:

        ಮತದಾರರು ಭವ್ಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಬೆಂಬಲಿಸಬೇಕು. ನರೇಂದ್ರ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿ ಮಾಡ ಬೇಕು ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹೇಳಿದರು.ಹುಳಿಯಾರಿನಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

       ದೇಶದಲ್ಲಿ ಮೋದಿ ಗಾಳಿ ಬಲವಾಗಿ ಬೀಸುತ್ತಿದೆ. ಮೋದಿ ಸುನಾಮಿಗೆ ವಿರೋಧ ಪಕ್ಷಗಳು ನೆಲಕಚ್ಚುತ್ತವೆ. ದೇಶಕ್ಕಾಗಿ ಟೊಂಕ ಕಟ್ಟಿ ದುಡಿಯುವ ಮತ್ತೊಬ್ಬ ಪ್ರಧಾನಿ ಅಭ್ಯರ್ಥಿ ಕಣದಲ್ಲಿ ಇಲ್ಲದಾಗಿದ್ದಾರೆ. ಮೋದಿ ಅವರು ಒಂದು ಕಪ್ಪು ಚುಕ್ಕೆಯೂ ಇಲ್ಲದೆ ಪ್ರಾಮಾಣಿಕವಾಗಿ ದೇಶ ಸೇವೆ ಮಾಡುತ್ತಿದ್ದಾರೆ. ಅವರು 55 ಲಕ್ಷ ಮೌಲ್ಯದ ಅಸ್ತಿಯನ್ನು ಮಾತ್ರ ಹೊಂದಿದ್ದಾರೆ. ಅವರ ವರ್ಚಸ್ಸು ಹಾಗೂ ಕಾರ್ಯವೈಖರಿ ಬಿಜೆಗೆ ಗೆಲುವು ತಂದು ಕೊಡುತ್ತದೆ. ದೇಶದಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಹಾಗೂ ರಾಜ್ಯದಲ್ಲಿ 22 ರಿಂದ 24 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಹೇಳಿದರು.

         ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. 30 ಕೋಟಿ ಬ್ಯಾಂಕ್ ಖಾತೆ ತೆರೆಸುವುದರ ಮೂಲಕ ಸರ್ಕಾರಿ ಸೌಲಭ್ಯ ಮಧ್ಯವರ್ತಿಗಳ ಪಾಲಾ ಗುವುದನ್ನು ತಡೆದಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರ 9 ಕೋಟಿ ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚ ಮುಕ್ತಗೊಳಿಸಲು ಪ್ರಮಾಣಿಕ ಪ್ರಯತ್ನ ಮಾಡಿದೆ. ಬಡವರಿಗೆ 2.5 ಕೋಟಿ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಭೀಮ್ ಫಸಲ್ ಯೋಜನೆ ಮೂಲಕ ರೈತರಿಗೆ ನೆರವಾಗಿದೆ ಎಂದು ಹೇಳಿದರು.

        ಪಟ್ಟಣ ಪಂಚಾಯ್ತಿ ಸದಸ್ಯರಾದ ಕೋಳಿಶ್ರೀನಿವಾಸ್, ಬಡ್ಡಿಪುಟ್ಟರಾಜು, ಮುಖಂಡರಾಜ ಜಗದೀಶ್, ನರೇಂದ್ರಬಾಬು, ಟ್ರ್ಯಾಕ್ಟರ್ ಮಂಜಣ್ಣ, ಧನಂಜಯ್ಯ, ವಿವೇಕಾನಂದ, ವಿಜಿ, ಕಾಯಿ ಬಸವರಾಜು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link