ಚಳ್ಳಕೆರೆ
ನಗರಸಭೆಯ ಮೂಲಕ ವಾರ್ಡ್‍ನ ಎಲ್ಲಾ ನಾಗರೀಕರಿಗೂ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಈಗಾಗಲೇ ವಾರ್ಡ್ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಚರಂಡಿ ವ್ಯವಸ್ಥೆ, ಸಮರ್ಪಕವಾಗಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು 11ನೇ ವಾರ್ಡ್‍ನ ನಗರಸಭಾ ಸದಸ್ಯ, ಬಿಜೆಪಿ ಮುಖಂಡ ಎಸ್.ಜಯಣ್ಣ ತಿಳಿಸಿದರು.
ಅವರು, ಶನಿವಾರ 11ನೇ ವಾರ್ಡ್ ವ್ಯಾಪ್ತಿಯಲ್ಲಿ 109 ಮೀಟರ್ 6.20 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು 3.15 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಕುರಿತಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡುವಂತೆ ತಿಳಿಸಲಾಗಿದೆ. ಯಾವುದೇ ಹಂತದಲ್ಲೂ ಕಾಮಗಾರಿಯ ಗುಣಮಟ್ಟದ ಕಳಪೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ.
ಕಾಮಗಾರಿ ಪ್ರಗತಿ ಸಂದರ್ಭದಲ್ಲಿ ಪೌರಾಯುಕ್ತರು, ನಗರಸಭೆಯ ಸಂಬಂಧಪಟ್ಟ ಇಂಜಿನಿಯರ್‍ವರ ಉಸ್ತುವಾರಿಯಲ್ಲಿ ಕಾಮಗಾರಿಯನ್ನು ಕೈಗೊಳ್ಳಬೇಕಿದೆ. 11ನೇ ವಾರ್ಡ್ ವ್ಯಾಪ್ತಿಯಲ್ಲಿ ಇನ್ನೂ ಕೆಲವೆಡೆ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಬೇಡಿಕೆ ಇದ್ದು, ಹಂತ ಹಂತವಾಗಿ ಪೂರೈಸಲಾಗುವುದು. ವಾರ್ಡ್ ವ್ಯಾಪ್ತಿಯಲ್ಲಿರುವ ಪಾರ್ಕ್‍ಗಳ ಅಭಿವೃದ್ಧಿಗೆ ಗಮನ ನೀಡಲಾಗುವುದು. ವಾರ್ಡ್‍ನ ಸ್ವಚ್ಚತೆಯ ಬಗ್ಗೆ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಾರ್ಡ್‍ನ ಹಿರಿಯ ಮುಖಂಡರಾದ ಬಿ.ಎಸ್.ವೀರಭದ್ರಪ್ಪ, ಅಶೋಕರೆಡ್ಡಿ, ಜಿ.ಆರ್.ಲಕ್ಷ್ಮಣ, ಗುರುರಾಜ್, ಗುತ್ತಿಗೆದಾರ ಜಿ.ಚಂದ್ರಣ್ಣ, ಹೊನ್ನೇಶ್, ರಘು ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
