ಫೆಬ್ರವರಿ 22 ಮತ್ತು 23 ರಂದು ನಗರದಲ್ಲಿ ಬೃಹತ್  ಉದ್ಯೋಗ ಮೇಳ -ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ
 
     ನಗರದಲ್ಲಿ ಫೆಬ್ರುವರಿ 22 ಮತ್ತು 23 ರಂದು ಎರಡು ದಿನಗಳಕಾಲ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ  ಅಗತ್ಯ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ನಗರದ ಹುಕ್ಕೇರಿಮಠದ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು  ಆಯೋಜಿಸಲು ಉದ್ದೇಶಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗದಾತರಿಗೆ ಅನುಕೂಲರ ವಾತಾವರಣ ನಿರ್ಮಿಸಬೇಕು. ಉದ್ಯೋಗ ಮೇಳ ಯಶಸ್ವಿಯಾಗಲು ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಅವರು ಉದ್ಯೋಗ ಮೇಳದ ಕಾರ್ಯಚಟುವಟಿಕೆಗಳಿಗೆ ವಿವಿಧ ಸಮಿತಿಗಳನ್ನು ರಚಿಸಲು ತಿಳಿಸಿದರು.
    ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾತನಾಡಿ, ಉದ್ಯೋಗದಾತರು ಹಾಗೂ ಉದ್ಯೋಕಾಂಕ್ಷಿಗಳ ನೋಂದಣಿಗಾಗಿ ದೂರವಾಣಿ ಸಂಖ್ಯೆ 08375-249291 ಹಾಗೂ ಇ-ಮೇಲ್ ಸೌಲಭ್ಯ  ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ  ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link