ಬೆಂಗಳೂರು :
ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆಯನ್ನು ಈ ತಿಂಗಳ 31ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಬಳಿ ಏರ್ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರದಲ್ಲಿಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೈತ್ರಿ ಪಕ್ಷಗಳ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಉಪಮುಖ್ಯಮಂತ್ರಿ ಡಾ|| ಜಿ. ಪರಮೇಶ್ವರ್ ಹಾಗೂ ತಾವು ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿರುವರು ಎಂದು ಹೇಳಿದರು.
ಜಂಟಿ ಚುನಾವಣಾ ಪ್ರಚಾರ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈ ಸಭೆ ನಂತರ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 


