ದಾವಣಗೆರೆ
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 30 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದಂತೆ ಸ್ವಾಮಿನಾಥನ್ ಆಯೋಗದ ವರದಿಯ ಶಿಫಾರಸುಗಳನ್ನು ಕೇಂದ್ರ ಸರಕಾರ ಯಥಾವತ್ತಾಗಿ ಜಾರಿಗೆ ತರಬೇಕೆನ್ನುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಈ ಸಮಾವೇಶದಲ್ಲಿ ರಾಜ್ಯದ 5 ಸಾವಿರ ರೈತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








