ನವದೆಹಲಿ:
ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಕೊನೆಗೂ ದಿನಾಂಕ ನಿಗದಿ ಮಾಡಿದ್ದು ಅಕ್ಬೋಬರ್ 28, ನವೆಂಬರ್3, 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಹಾರ ವಿಧಾನಸಭೆ ಚುನಾವಣೆ ಒಟ್ಟು ಮೂರು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಂತೆಯೇ ನವೆಂಬರ್ 3ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, 94 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಸಲಾಗುತ್ತದೆ. ಅಂತಿಮ ಮತ್ತು 3ನೇ ಹಂತದ ಚುನಾವಣೆ ನವೆಂಬರ್ 7ರಂದು ನಡೆಯಲಿದ್ದು, ಒಟ್ಟು 78 ವಿಧಾನಸಭಾ ಕ್ಷೇತ್ರಗಳಲ್ಲಿ ಅಂದು ಮತದಾನ ನಡೆಯಲಿದೆ.
