ಕುಣಿಗಲ್
ಹೆಲ್ಮೆಟ್ ಧರಿಸುವ ಮೂಲಕ ಅಪಘಾತದಿಂದ ತಮ್ಮ ಪ್ರಾಣರಕ್ಷಣೆ ಮಾಡಿಕೊಳ್ಳಬೇಕೆಂದು ಪೊಲೀಸರು ಬೈಕ್ ಜಾಥಾ ಮೂಲಕ ಅರಿವು ಮೂಡಿಸಿದರು. ಪಟ್ಟಣದಲ್ಲಿ ಪೊಲೀಸರು ಆಯೋಜಿಸಿದ್ದ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿವೈಎಸ್‍ಪಿ ರಾಮಲಿಂಗೇಗೌಡ ಸ್ವತಃ ಬೈಕಿನಲ್ಲಿ ಹೆಲ್ಮೆಟ್ ಧರಿಸಿ ಪಟ್ಟಣದಾದ್ಯಂತ ಬೈಕ್ ರ್ಯಾಲಿ ನಡೆಸಿ ಪ್ರತಿಯೊಬ್ಬ ನಾಗರೀಕರು ಅಪಘಾತದಿಂದ ಆಗುವ ಸಾವು ನೋವುಗಳನ್ನು ತಪ್ಪಿಸುವ ದೃಷ್ಟಿಯಿಂದ ಬೈಕ್ ಸವಾರರು ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಿ.ಪಿ.ಐ ಅಶೋಕ್‍ಕುಮಾರ್, ಪಿ.ಎಸ್ಸೈ ವಿಕಾಸ್‍ಗೌಡ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹೆಲ್ಮೆಟ್ ಧರಿಸಿ ಬೈಕ್ ಜಾಥಾ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.