ಬೆಂಗಳೂರು
ವೇಗವಾಗಿ ಹೋಗುತ್ತಿದ್ದ ಸ್ಕೂಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೆಆರ್ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿಯ ಬಾಗ್ಮನೆ ಟೆಕ್‍ಪಾರ್ಕ್ ಬಳಿ ನಡೆದಿದೆ.
ದೊಡ್ಡನೆಕ್ಕುಂದಿಯ ಮುನಿರಾಜು (37)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ ಅಪಘಾತದಲ್ಲಿ ಗಾಯಗೊಂಡಿರುವ ಗೌವಪ್ಪ (35) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಸ್ರೋ ಕಂಪನಿಯ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುತ್ತಿದ್ದ ಇವರಿಬ್ಬರು ಹೆಲ್ಮೆಟ್ ಹಾಕದೆ ಮನೆಗೆ ದೊಡ್ಡನೆಕ್ಕುಂದಿ ರಸ್ತೆಯಲ್ಲಿ ನಿನ್ನೆ ಮಧ್ಯರಾತ್ರಿ 1ರ ವೇಳೆ ಹೋಂಡಾ ಆಕ್ಟಿವಾ ಸ್ಕೂಟರ್‍ನಲ್ಲಿ ವೇಗವಾಗಿ ಹೋಗುತ್ತಿದ್ದಾಗ ರಸ್ತೆವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಮುನಿರಾಜು, .ಸ್ಥಳದಲ್ಲೇ ಮೃತಪಟ್ಟರೆ, ಗೌವಪ್ಪ ಗಾಯಗೊಂಡರು. ಪ್ರಕರಣ ದಾಖಲಿಸಿರುವ ಕೆಆರ್ ಪುರ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
