ಜಾಮೀನಿನ ಮೇಲೆ ಹೊರ ಬಂದು ಬೈಕ್‍ಗಳನ್ನು ಕಳವು ಮಾಡುತ್ತಿದ್ದವನ ಬಂಧನ

0
19

ಬೆಂಗಳೂರು

     ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಹೊರ ಬಂದು ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಹೆಚ್‍ಎಎಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

     ಹೆಚ್‍ಎಎಲ್‍ನ ಶೇಕ್ ಇಮ್ರಾನ್ (25) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 4 ಲಕ್ಷ 25 ಸಾವಿರ ಮೌಲ್ಯದ 9 ದ್ವಿಚಕ್ರ ವಾಹನ, 2 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

      ಆರೋಪಿಯು 2015ರಲ್ಲಿ ಮನೆಗಳವು, ವಾಹನ ಕಳವು ಕೃತ್ಯದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದು ನ್ಯಾಯಾಲಯಕ್ಕೆ ಹಾಜರಾಗದೆ ರಾತ್ರಿ ವೇಳೆ ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ. ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ಮೋಜಿನ ಜೀವನ ನಡೆಸುತ್ತಿದ್ದ. ಈತನ ಬಂಧನದಿಂದ ಹೆಚ್.ಎ.ಎಲ್, ಮಾರತ್‍ಹಳ್ಳಿ, ಬೈಯ್ಯಪ್ಪನಹಳ್ಳಿ, ಜೀವನ್ ಭಿಮಾನಗರದ 9 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here