ಬಳ್ಳಾರಿ:
ಲಾರಿಯೊಂದು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಡೂರಿನ ತೊರಣಗಲ್ನಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕಾಶೀಂ (30) ಎಂದು ಗುರುತಿಸಲಾಗಿದೆ ಆದರೆ ಅಪಘಾತದ ರಭಸಕ್ಕೆ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಹಿಂಬದಿ ಸವಾರನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ . ಲಾರಿ ಜಿಂದಾಲ್ ಉಕ್ಕು ಕಾರ್ಖಾನೆಗೆ ಸೇರಿದೆ ಎಂದು ತಿಳಿದು ಬಂದಿದೆ. ಈ ಕುರಿತು ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.