ರೈತರಿಗೆ ಬಿತ್ತನೆ ಬೀಜ ವಿತರಣೆ..!!

ಹಾವೇರಿ :

     ತಾಲೂಕಿನ ನೆಗಳೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸಿದ್ಧರಾಜ ಕಲಕೋಟಿ ಹೊಸರಿತ್ತಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಸಬ್ಸಿಡಿದರ ಬಿತ್ತನೆ ಬೀಜಗಳನ್ನು ವಿತರಿಸಿದರು.

      ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಸಿದ್ಧರಾಜ ಕಲಕೋಟಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಅವುಗಳು ನಿಜವಾದ ರೈತ ಫಲಾನುಭವಿಗಳಿಗೆ ತಲುಪುವಲ್ಲಿ ಹಿನ್ನಡೆಯಾಗಿದೆ. ಸರ್ಕಾರಿ ಅಧಿಕಾರಿಗಳು ರೈತರಿಗಾಗಿ ಇರುವ ಯೋಜನೆಗಳ ಕುರಿತು ಸಲಹೆ ನೀಡಬೇಕು ಹಾಗೂ ಅವುಗಳು ನೈಜ ಫಲಾನುಭವಿಗಳಿಗೆ ತಲುಪುವಂತೆ ಜಾಗೃತೆ ವಹಿಸಬೆಕು, ಮುಖ್ಯವಾಗಿ ಕಳಪೆ ಬಿತ್ತನೆ ಬೀಜ ಕಂಪನಿಗಳಿಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.

       ಇತ್ತೀಚಿಗೆ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಅಲ್ಲದೆ ಬಹುತೇಕ ರೈತರು ಆರ್ಥಿಕವಾಗಿ ಹಿಂದುಳಿದಿದ್ದು, ಸಾಂಪ್ರದಾಯಿಕ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಇದಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಈ ಕಾರಣದಿಂದ ರೈತರು ಕೃಷಿಯಲ್ಲಿ ವೈಜ್ಞಾನಿಕತೆಯನ್ನು ಅಳವಡಿಸಿಕೊಂಡು ಉತ್ತಮ ಇಳವರಿಯೊಂದಿಗೆ ಮಾರುಕಟ್ಟೆಯಲ್ಲಿ ಉತ್ತಮ ದರವನ್ನೂ ಪಡೆಯಬಹುದಾಗಿದೆ.

      ನೀರಾವರಿಯಲ್ಲಿ ಹನಿ ಹಾಗೂ ತುಂತುರು ನೀರಾವತಿ ಪದ್ಧತಿಗಳನ್ನು ಅಳವಡಿಸಿಕೊಂಡರೆ ಕಡಿಮೆ ನೀರಿನ ಲಭ್ಯತೆಯಲ್ಲಿಯೂ ಉತ್ತಮ ಫಸಲು ಪಡೆಯಲು ಸಾಧ್ಯವಾಗಲಿದೆ. ರೈತರು ಯಾವುದೇ ಕಾರಣಕ್ಕೂ ಎದೆಗುಂದದೆ ಕೃಷಿಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಿದ್ಧರಾಜ ಕಲಕೋಟಿ ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ಎ.ಎಸ್.ತಾಳೆವಾಡ, ಫಕೀರಪ್ಪ ಜಂಗಣ್ಣನವರ, ಬಸನಗೌಡ ರಾಮನಗೌಡ್ರ, ಬಸವರಾಜ ಗಾಣಿಗೇರ, ವೀರಭದ್ರಯ್ಯ ಸಾಲಿಮಠ, ಹನುಮಂತಪ್ಪ ವಡ್ಡರ, ಡಿಳ್ಳೇಪ್ಪ ಪಾಟೀಲ, ಮುದುಕಪ್ಪ ಮರಡೂರು ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link